Wednesday, October 20, 2021

ಸೋಮವಾರದಿಂದ 15 ದಿನ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್

Must Read
- Advertisement -

ಬೆಳಗಾವಿ ಮೇ 07-ಸೋಮವಾರದಿಂದ ಹದಿನೈದು ದಿನಗಳ ಕಾಲ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಿಸಿದ್ದಾರೆ‌.

ಇಂದು ಸಂಜೆ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ಕೊರೊನಾ  ದಿನೇದಿನೇ ಉಲ್ಬಣಗೊಳ್ಳುತ್ತಿದೆ, ಕಾರಣ ಕೂರೂನಾ ನಿಯಂತ್ರಿಸಲು ಲಾಕ್ ಡೌನ್ ಅನಿವಾರ್ಯವಾಗಿದೆ. ಆದ್ದರಿಂದ ದಿನಾಂಕ ಮೇ 10ರಿಂದ 24ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶಿಸಲಾಗಿದೆ ಎಂದು ತಿಳಿಸಿದರು.

- Advertisement -

ಸೋಮವಾರದಿಂದ ಕೈಗಾರಿಕೆ ಹೋಟೆಲ್ ಬಾರ್ ಸೇರಿ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಸರ್ಕಾರಿ ಕಛೇರಿಗಳು ಭಾಗಶಃ ಕಾರ್ಯನಿರ್ವಹಿಸಲಿವೆ. ವೈದ್ಯಕೀಯ ಸೇವೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಅಗತ್ಯವಸ್ತುಗಳ ಸಾಗಾಟಕ್ಕೆ ವಾಹನಗಳನ್ನು ಸಂಚರಿಸಲು ಅವಕಾಶ ನೀಡಲಾಗಿದೆ, ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಪಾರ್ಸೆಲ್ ಸೇವೆ ಲಭ್ಯವಿರಲಿದೆ ಎಂದು ತಿಳಿಸಿದರು.

- Advertisement -

ಮೇ 10ರಿಂದ 24ರವರೆಗೆ ಅಂತರ ರಾಜ್ಯ ಮತ್ತು ಅಂತರ್ ಜಿಲ್ಲಾ ಓಡಾಟವನ್ನು ನಿರ್ಬಂಧಿಸಲಾಗಿದೆ. ಈ ಸಮಯದಲ್ಲಿ ಯಾರಾದರೂ ಅನಗತ್ಯವಾಗಿ ರಸ್ತೆಯಲ್ಲಿ ಹೋರಾಟ ಮಾಡುತ್ತಿರುವುದು ಕಂಡುಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಚಲನಚಿತ್ರ ಮಂದಿರಗಳು ಪಾರ್ಕುಗಳು ಈಜುಕೊಳಗಳು ಕ್ರೀಡಾ ಕಟ್ಟಡಗಳು ಬಂದ್ ಆಗಿರಲಿದೆ.  ರಾಜಕೀಯ ಸಾಮಾಜಿಕ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದನ್ನ ನಿಷೇಧಿಸಲಾಗಿದೆ.

 

ಟ್ಯಾಕ್ಸಿ ಮತ್ತು ಆಟೋಗಳ ಓಡಾಟವನ್ನು  ನಿರ್ಬಂಧಿಸಲಾಗಿದೆ. ಆದರೆ ತುರ್ತು ಸಂದರ್ಭಗಳಲ್ಲಿ ಮಾತ್ರ  ಅವಕಾಶ ನೀಡಲಾಗಿದೆ .

ಇಂದು ಬೆಳಗ್ಗೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿ ಈ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

 

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -
Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -
- Advertisement -