Friday, October 22, 2021

ಕೊರೊನಾದ ಮತ್ತೊಂದು ಅಲೆಯನ್ನು ಆಹ್ವಾನಿಸುತ್ತಿದೆ ಸರಕಾರದ ನಡೆ

Must Read
- Advertisement -

ಬೆಂಗಳೂರು ಮೇ., 20- ರಾಜ್ಯ ಸರಕಾರ ಕೆಲ ದಿನಗಳಿಂದ ಕೋವಿಡ್ ಟೆಸ್ಟ ಕಡಿಮೆ ಮಾಡಿರುವುದು ಕೊರೊನಾದ ಮತ್ತೊಂದು ಅಲೆಗೆ ಆಹ್ವಾನ ನೀಡುತ್ತಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ ಒಂದು ತಿಂಗಳ ಹಿಂದೆ ಪ್ರತಿ ದಿನ 1.9 ಲಕ್ಷ ಕೊರೋನಾ ಸೋಂಕಿನ ಪರೀಕ್ಷೆಗಳು ಮಾಡಲಾಗುತ್ತಿತ್ತು. ಆದರೆ ಈಗ ಕೊರೊನಾ ಪರೀಕ್ಷೆ 93 ಸಾವಿರಕ್ಕೆ ಇಳಿಸಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಕೊರೊನಾ ಅಲೆಯನ್ನು ಅಹ್ವಾನಿಸಲಾಗುತ್ತಿದೆ ಎಂದು ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಬ್ಬರು ಎಚ್ಚರಿಸಿದ್ದಾರೆ.

- Advertisement -

ರಾಜ್ಯದಲ್ಲಿ ಕಳೆದ ಸೋಮವಾರ 97,236 ಕೊರೊನಾ ಪರೀಕ್ಷೆಗಳನ್ನು ಮಾಡಿದೆ, ಅದರಲ್ಲಿ 38603 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮಂಗಳವಾರ 93,247 ಕೊರೊನಾ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ 30309 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೇದ ಏಪ್ರೀಲ್ ತಿಂಗಳಲ್ಲಿ 1.7 ರಿಂದ 1.9 ಲಕ್ಷ ಕೊರೊನಾ ಪರೀಕ್ಷೆಗಳನ್ನು ಪ್ರತಿ ದಿನ ಮಾಡಲಾಗುತ್ತಿತ್ತು. ಆದರೆ ಅದನ್ನು ಇಂದು ಅರ್ಧಕ್ಕರ್ಧ ಇಳಿಸಲಾಗಿದೆ. ಇದು ಒಂದು ರೀತಿಯಲ್ಲಿ ನಾವು ಮೂರನೇ ಅಲೆಯನ್ನು ಆಹ್ವಾನಿಸುವಂತಿದೆ.

- Advertisement -

ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಮೇ ತಿಂಗಳಲ್ಲಿ ಸುಮಾರು 750 ಕ್ಕೂ ಹೆಚ್ಚು ಜನ ಮನೆಯಲ್ಲಿಯೇ ಮೃತರಾಗಿದ್ದಾರೆ. ಇದಕ್ಕೆ ಕೋವಿಡ್ ಪರೀಕ್ಷೆ ವರದಿ ವಿಳಂಬ, ಆಸ್ಪತ್ರೆಯಲ್ಲಿ ಬೇಡ್ ಸಿಗದಿರುವುದು ಮತ್ತು ಕೊರೊನಾ ತಗುಲಿರುವ ಬಗ್ಗೆ ಮಾಹಿತಿ ಇಲ್ಲದೆ ಇವರು ಮನೆಯಲ್ಲಿ ಸಾವಿಗಿಡಾಗಿದ್ದಾರೆ ಎನ್ನಲಾಗಿದೆ.

ಇನ್ನೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದವರು ಸೋಂಕನ್ನು ಮತ್ತಷ್ಟು ಹರಡುವ ಸಾಧ್ಯತು ಹೆಚ್ಚು ಇವೆ. ಇದಕ್ಕೆ ಇರುವ ಏಕೈಕ ಪರಿಹಾರವೆಂದರೆ ಹೆಚ್ಚು ಹೆಚ್ಚು ಕೊರೊನಾ ಪರೀಕ್ಷೆ ಮಾಡುವುದು ಎಂದು ಟಿಎಸಿ ಸದಸ್ಯ ಮತ್ತು ಭಾರತದ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಸಾಂಕ್ರಾಮಿಕ ರೋಗಶಾಸ್ತ್ರ ಪ್ರಾಧ್ಯಾಪಕ ಡಾ. ಗಿರಿಧರ ಆರ್ ಬಾಬು ಪಿಟಿಐಗೆ ತಿಳಿಸಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -
Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -
- Advertisement -