ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಮನೆ ಮೇಲೆ 20 ಐಟಿ ಅಧಿಕಾರಿಗಳ ದಾಳಿ

Ravi Talawar
WhatsApp Group Join Now
Telegram Group Join Now

ಬೆಂಗಳೂರು, ಗ್ರಾಮಾಂತರ,ಏಪ್ರಿಲ್ 16: ಜಿಲ್ಲೆಯ ನೆಲಮಂಗಲದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇತ್ತೀಚೆಗೆ ಉದ್ಯಮಿ ವೆಂಕಟ್ ರಾಜು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇಂದು (ಏ.16) 6 ಕಾರುಗಳಲ್ಲಿ ಬಂದಿರುವ 20 ಐಟಿ ಅಧಿಕಾರಿಗಳ ತಂಡದಿಂದ ಶೋಧ ಕಾರ್ಯ ನಡೆದಿದೆ.

ಕಾರಿನಲ್ಲಿ ಸಮರ್ಪಕ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 75 ಲಕ್ಷ ರೂ. ಹಣವನ್ನು​​ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಚೆಕ್​ಪೋಸ್ಟ್​ನಲ್ಲಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ.

KA-68 -2370 ಸಿಪ್ಟ್ ಡಿಸೈಯರ್ ವಾಹನದಲ್ಲಿ ಅಕ್ರಮ ಹಣ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಹಣ ಜಪ್ತಿ ಮಾಡಿದ್ದು, ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Share This Article