This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

೩ ನೇ ರೈಲ್ವೆ ಗೇಟ್ ಮೇಲ್ಸೇತುವೆ ಕಳಪೆ ಕಾಮಗಾರಿ : ಗುತ್ತಿಗೆದಾರನಿಗೆ ೨೦ ಲಕ್ಷ ದಂಡ


ಬೆಳಗಾವಿ ಅ.,೧೯- ಮೂರನೇ ರೈಲ್ವೆ ಗೇಟ್ ಮೇಲ್ಸೇತುವೇ ಕಾಮಗಾರಿ ಕಳಪೆಯಿಂದ ಕೂಡಿದೆ ಎಂದು ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತ್ತು. ಈ ಸಂಭಂಧ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು ಮೇಲ್ಸೇತುವೆ ವಾಹನಗಳ ಸಂಚಾರಕ್ಕೆ ಯೋಗ್ಯವಾಗಿದೆ ಎಂದು ತಿಳಿಸಿದ್ದಾರೆ. ಆದರೆ ಭಾರಿ ಮಳೆಯಿಂದಾಗಿ ರಸ್ತೆಯ ಡಾಂಬರ ಮತ್ತು ಮೇಲ್ಪದರು ಕಿತ್ತುಹೋಗಿದೆ ಎಂದು ತಿಳಿಸಿದ್ದಾರೆ.
ರಸ್ತೆಗೆ ಡಾಂಬರೀಕರಣ ಮಾಡುವಾಗ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಗುತ್ತಿಗೆದಾರನಿಗೆ ೨೦ ಲಕ್ಷ ರೂ. ದಂಡವಿಧಿಸಲಾಗಿದೆ ಎಂದು ತಿಳಿದುಬಂದಿದೆ.

ನಗರದ ಟಿಳಕವಾಡಿ ಮೂರನೇ ರೈಲ್ವೆ ಗೇಟ್ ಮೇಲ್ಸೇತುವೆ ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಈ ರಸ್ತೆಯಲ್ಲಿ ಗುಂಡಿ ಬಿದ್ದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಜನತೆಯ ವಿಶ್ವಾಸಾರ್ಹ ರೈಲ್ವೆ ಇಲಾಖೆಯಿಂದ ಕಳಪೆ ಕಾಮಗಾರಿ ನಡೆದಿರುವುದು ವಿಷಾದಕರ ಸಂಗತಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಟಿಳಕವಾಡಿ ಮೂರನೇ ರೈಲ್ವೆ ಗೇಟ್ ಮೇಲ್ಸೇತುವೆ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದೆ. ಈ ಮೊದಲು ನಿರ್ಮಾಣಗೊಂಡ ಎರಡನೇಯ ರೈಲ್ವೆ ಮೇಲ್ಸೇತುವೆಯಲ್ಲಿ ಸಮಸ್ಯೆ ಉದ್ಭವವಾಗಿತ್ತು. ನಂತರ ಆ ಸಮಸ್ಯೆ ಪರಿಹರಿಸಲಾಯಿತು. ಅದೇ ರೀತಿ ಮೂರನೇ ರೈಲ್ವೆ ಗೇಟ್ ಮೇಲ್ಸೇತುವೆ ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿರಸ್ತೆ ಎಲ್ಲ ಬೇಕೆಂದರಲ್ಲಿ ಗುಂಡಿಗಳು ಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ. ಜನರ ಹಿತ ಕಾಪಾಡಬೇಕಾದ ರೈಲ್ವೆ ಇಲಾಖೆ ಉತ್ತಮ ಕಲಸ ನಿರ್ವಹಿಸಲಾಗುತ್ತೆ ಎಂದು ನಂಬಿಕೆ ಇಡಲಾಗಿತ್ತು. ಆದರೆ ಈ ಇಲಾಖೆಯಲ್ಲಿ ಗುತ್ತಿಗೆ ಸಿಗುವುದು ಅಪರೂಪ, ಸಿಕ್ಕಂತ ಅವಕಾಶ ದುರುಪಯೋಗವಾಗ ಮಾಡಿಕೊಳ್ಳಲಾಗಿದೆ. ರೈಲ್ವೆ ಇಲಾಖೆ ಸಹ ರಾಜ್ಯ ಸರ್ಕಾರದ ಕಾರ್ಯವೈಖರಿ ಮಾದರಿಯಲ್ಲಿ ಬಂದು ನಿಂತಿದೆ ಎಂದು ಕಿಡಿಕಾರಿದರು.

ಅವೈಜ್ಞಾನಿಕದಿಂದ ಕೂಡಿದ ಮೇಲ್ಸೇತುವೆ: ಅವೈಜ್ಞಾನಿಕ ಕಾಮಗಾರಿ ಬಗ್ಗೆ ರಾಜ್ಯ- ರಾಷ್ಟ್ರೀಯ ಮಾದ್ಯಮಗಳಲ್ಲಿ ಚರ್ಚೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಟಿಳಕವಾಡಿ ಮೂರನೇ ರೈಲ್ವೆ ಗೇಟ್ ಮೇಲ್ಸೇತುವೆ ಮೇಲೆ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ಮೂರನೇ ರೈಲ್ವೆ ಗೇಟ್ ಮೇಲ್ಸೇತುವೆ ಪೂರ್ಣಗೊಳಿಸಲು ನಾಲ್ಕು ವರ್ಷ ಸಮಯ ತಗೆದುಕೊಂಡರೂ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ತರಾತುರಿಯಲ್ಲಿ ಉದ್ಘಾಟನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ರಸ್ತೆ ಮೇಲ್ಸೆತುವೆ ಅವೈಜ್ಞಾನಿಕವಾಗಿದೆ. ಈ ಕಳಪೆ ಕಾಮಗಾರಿ ಬಗ್ಗೆ ಸಂಪೂರ್ಣ ತನಿಖೆಯಾಗಬೇಕೆಂದು ಶಾಸಕ ಸತೀಶ ಜಾರಕಿಹೊಳಿ ಒತ್ತಾಯಿಸಿದರು.


Leave a Reply