ದ್ವಿತೀಯ ಪಿಯುಸಿ ಫಲಿತಾಂಶ: ಮೂವರು ವಿದ್ಯಾರ್ಥಿನಿ, ಓರ್ವ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

Ravi Talawar
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 10: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ಬೈರಿದೇವರಕೊಪ್ಪದ ವಿದ್ಯಾನೀಕೇತನ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಲಕ್ಷ್ಮೀ ಅವರು 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಮೂವರು ಟಾಪರ್​ಗಳಾಗಿದ್ದಾರೆ. ​​ಬೆಂಗಳೂರಿನ ಜಯನಗರದ NMKRV ಕಾಲೇಜಿನ ಮೇಧಾ.ಡಿ, ವಿಜಯಪುರದ ಎಸ್​ಎಸ್​ ಪಿಯು ಕಾಲೇಜಿನ ವಿದ್ಯಾರ್ಥಿ ವೇದಾಂತ್, ವಿಜಯನಗರ ಜಿಲ್ಲೆ ಕೊಟ್ಟೂರಿನ​ ಬಿ.ವಿ.ಕವಿತಾ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ವಿದ್ಯಾರ್ಥಿನಿ ಜ್ಞಾನವಿ 600ಕ್ಕೆ 597 ಅಂಕ ಪಡೆಯುವ ಮೂಲಕ ಫಸ್ಟ್​​ ರ್ಯಾಂಕ್​ ಬಂದಿದ್ದಾರೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಸುದ್ದಿಗೋಷ್ಠಿ ನಡೆಸಿ, ದ್ವೀತಿಯ ಪಿಯುಸಿ ಫಲಿತಾಂಶದಲ್ಲಿ ಶೇ97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಶೇ.96.80ರಷ್ಟು ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆಗೆ ಎರಡನೇ ಸ್ಥಾನದಲ್ಲಿದ್ದರೇ, ಶೇ.94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆಗೆ 3ನೇ ಸ್ಥಾನದಲ್ಲಿದೆ.

ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ 2024ನೇ ಸಾಲಿನ ಪಿಯುಸಿ ಪರೀಕ್ಷೆಯನ್ನು ಒಟ್ಟು 6.9 ಲಕ್ಷ ವಿದ್ಯಾರ್ಥಿಗಳು ಬರೆದರು. ಇದರಲ್ಲಿ 3.3 ಲಕ್ಷ ವಿದ್ಯಾರ್ಥಿಗಳು, 3.6 ಲಕ್ಷ ವಿದ್ಯಾರ್ಥಿನಿಯರು ಪರೀಕ್ಷೆ ಬರೆದರು. ಮೂರು ಭಾಗಗಳಲ್ಲಿ ದ್ವಿತೀಯ ಪರೀಕ್ಷೆ ನಡೆಸಲಾಗಿತ್ತು. ಪ್ರಸಕ್ತ ವರ್ಷದ ಶೇಕಡಾ ವಾರು ಫಲಿತಾಂಶ ಶೇ 81.15 ರಷ್ಟು ಆಗಿದೆ.

2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

WhatsApp Group Join Now
Telegram Group Join Now
Share This Article