ಮೂಡಲಗಿ ಸೆ.,೧೫ : ಮೂಡಲಗಿ ಶ್ರೀ ಶ್ರೀಪಾದಬೋಧ ಸರಕಾರಿ ಪ್ರಥಮದರ್ಜೆ ಕಾಲೇಜಿನ ಅಪ್ರತಿಮ ಪ್ರತಿಭೆಯಾದ ಅನ್ನಪೂರ್ಣ ಪಾಶ್ಚಾಪೂರ ಅವರು ೨೦೨೦-೨೧ ನೇ ಸಾಲಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಬಿ.ಎಸ್ಸಿ ವಿಭಾಗದಲ್ಲಿ ೯ ನೇ ರ್ಯಾಂಕ್ ಗಳಿಸಿರುವುದು ಹೆಮ್ಮೆಯ ವಿಷಯವಾಗಿದೆ.
ಇವರಿಗೆ ದಿನಾಂಕ ೧೪-೦೯-೨೦೨೨ ರಂದು ಸುವರ್ಣ ವಿಧಾನಸೌಧ ಬೆಳಗಾವಿ ಇಲ್ಲಿ ನಡೆದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಘಟಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿನಿಯ ಸಾಧನೆಗೆ ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ಕಾಲೇಜು ಅಭಿವೃದ್ಧಿ ಸಮಿತಿಯ ಅದ್ಯಕ್ಷರು, ಸದಸ್ಯರು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.