Friday, October 22, 2021

ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲುಗಳ ರಕ್ಷಣೆಗಾ? : ಸಿದ್ದರಾಮಯ್ಯ

Must Read
- Advertisement -

ಬೆಂಗಳೂರು ಮೇ., 05- ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ದವಲ್ಲ, ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ, ಸಚಿವರು ಮತ್ತು ಬಿಜೆಪಿ ಶಾಸಕರು, ಸಂಸದರ ವಿರುದ್ದ. ಸಣ್ಣ ಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲುಗಳ ರಕ್ಷಣೆಗಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಂಸದ ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ ಮತ್ತು ಸತೀಶದ ರೆಡ್ಡಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸರಣಿ ಟ್ವಿಟ್‍ಗಳ ಮೂಲಕ ಸರಕಾರದ ವಿರುದ್ದ ಆಕ್ರೋಶ ಹೊರಹಾಕಿರುವ ಅವರು ಕೊರೊನಾ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಟಿ ನಡೆಸಿ ಕೊರೊನಾ ನಿರ್ವಹಣೆಯಲ್ಲಿ ಭ್ರಷ್ಟಾಚಾರವನ್ನು ದಾಖಲೆಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆಗೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ ಹೈಕೋರ್ಟ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಎಂದು ಸಂಸದ ತೇಜಸ್ವಿ ಸೂರ್ಯಗೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

- Advertisement -

ಬೆಡ್ ಬ್ಲಾಕಿಂಗ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಅಥವಾ ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ?. ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು ಎಂದು ತೇಜಸ್ವಿ ಸೂರ್ಯ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ, ಕೊರೊನಾ ವೈರಸ್‍ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಮೊದಲು ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಿ. ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ನೀವು, ಮುಖ್ಯ ಆರೋಪಿಗಳಾದ ರಾಜ್ಯದ ಮುಖ್ಯಮಂತ್ರಿ ಇಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನು ಓದಿ ಹೇಳಿಬಿಡಿ ಎಂದು ತೇಜಸ್ವಿ ಸೂರ್ಯ ಅವರನ್ನು ಸಿದ್ದರಾಮಯ್ಯ ತರಾಟಗೆ ತೆಗೆದುಕೊಂಡಿದ್ದಾರೆ.

ಕೊರೊನಾ ನಿರ್ವಹಣೆಯಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟಾಚಾರ ನಡೆದಿದ್ದರೆ ಅವರ ವಿರುದ್ದ ನೇರ ಆರೋಪಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ಳುತ್ತಿರಿ. ‘ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ. ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ, ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಬಿ.ಎಸ್.ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ ಎಂದು ಸಿದ್ದರಾಮಯ್ಯ ಟ್ಟಿಟ್ ಮಾಡಿದ್ದಾರೆ.

ಇಂದು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಕೊರೊನಾ ಪರಿಸ್ಥತಿ ನಿರ್ವಹಣೆಯ ಕುರಿತಾಗಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರೊಂದಿಗೆ ಚರ್ಚೆ ನಡೆಸಿ, ಜನತೆ ಎದುರಿಸುತ್ತಿರುವ ಸಮಸ್ಯೆಗಳು, ಆಕ್ಸಿಜನ್, ಬೆಡ್, ವೆಂಟಿಲೇಟರ್‍ಗಳ ಕೊರತೆ, ಇದಕ್ಕೆ ಪತ್ರಿಯಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -
Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -
- Advertisement -