Friday, October 22, 2021

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

Must Read
- Advertisement -

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ.
94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ ಬಹಳಷ್ಟು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಜೂನ್ 30 ರಂದು ನಗರದ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಜೂನ್ 6 ರಂದು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು.
ಜ್ವರ್ ಭಾತಾ ಚಿತ್ರದ ಮೂಲಕ 1944 ರಲ್ಲಿ ಚಿತ್ರರಂಗವನ್ನು ಪ್ರವೇಶಿಸಿದ್ದ ದಿಲೀಪ ಕುಮಾರ ಅವರು ದೇವದಾಸ್, ನಯಾ ದೌರ್, ಮೊಘಲ್ -ಎ-ಅಜಮ, ಗಂಗಾ ಜಮುನಾ, ಕ್ರಾಂತಿ, ಕರ್ಮ, ಸೌದಾಗರ್. ಶಕ್ತಿ, ಆಜಾದ, ಮುಂತಾದ ಚಿತ್ರಗಳಿಂದ ಜನರ ಮನಸ್ಸಿನಲ್ಲಿ ನೆಲೆಸಿದ್ದರು. ಅವರ ಕೊನೆಯ ಸಿನೆಮಾ 1998ರಲ್ಲಿಯ ಕಿಲಾ ಆಗಿದೆ.
ಅವರ ಅಂತಿಮ ಸಂಸ್ಕಾರವನ್ನು ಸಾಂಟ್ರಾಕ್ರೂಜ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಇವರ ನಿಧನಕ್ಕೆ ಪ್ರಧಾನಿ ಮೋದಿ ಸಹಿತ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -
Latest News

ಖ್ಯಾತ ಹಿರಿಯ ನಟ ದಿಲೀಪ ಕುಮಾರ ನಿಧನ

ಮುಂಬೈ ಜು., 07- ಭಾರತದ ಚಿತ್ರರಂಗದ ದಿಗ್ಗಜ ದಿಲೀಪ್‍ಕುಮಾರ ಇಂದು ಮುಂಜಾನೆ 7.30 ಕ್ಕೆ ವಿಧಿವಶರಾಗಿದ್ದಾರೆ. 94 ವರ್ಷ ವಯಸ್ಸಿನ ಹಿರಿಯ, ಜನಪ್ರೀಯ ನಡ ದಿಲೀಪ ಕುಮಾರ...
- Advertisement -
- Advertisement -