ಚಿಕ್ಕೋಡಿ: ದ್ವಿಚಕ್ರ ವಾಹನ, ಗೂಡ್ಸ ವಾಹನಗಳ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕೋಡಿ ತಾಲೂಕಿನ ನಾಗರ ಮುನ್ನೋಳಿ ಬಳಿ ಘಟನೆ ನಡೆದಿದೆ. ಖುತ್ಬು ಮೌಲಾ ಪೆಂಧಾರಿ, ದಸ್ತಗೀರ ಹಸನ್ ಮುಲ್ತಾನಿ, ಶ್ರೀಕಾಂತ ಯಲಪ್ಪ ಕಾಂಬಳೆ ಎಂಬುವರಿಗೆ ಗಂಭೀರವಾಗಿ ಗಾಯವಾಗಿದೆ.

ಗಾಯಗೊಂಡವರು ನಿನ್ಮೆ ಸಂಜೆ ದ್ವಿಚಕ್ರ ವಾಹನದಲ್ಲಿ ಚಿಕ್ಕೋಡಿಯಿಂದ ನಾಗರಮುನ್ನಳಿ ಕಡೆಗೆ ಹೋಗುತ್ತಿದ್ದರು. ಅದೇ ವೇಳೆ ಹಿಂದಿನಿಂದ ಬಂದ ಯೆಶಾರ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ದ್ವಿಚಕ್ರ ವಾಹನದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೂಡ್ಸ ವಾಹನದ ಚಾಲಕ ವಾಹನ ಬಿಟ್ಟು ಓಡಿ ಹೋಗಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಸಂಚಾರಿ ಠಾಣೆಯ ಪಿಎಸ್ಐ ಅಮೀನಭಾವಿ ಭೇಟಿ ನೀಡಿ ಪಂಚನಾಮೆ ನಡೆಸಿದರು. ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.