ಎಂ. ಕೆ. ಹುಬ್ಬಳ್ಳಿ :ಸಮೀಪದ ಅಂಬಡಗಟ್ಟಿ ಕ್ರಾಸ್ ಬಳಿ ಚಲಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೇ ಸೋಮವಾರ ಮುಂಜಾನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಮುಂಜಾನೆ ಬೆಳಗಾವಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಲಾರಿ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಲಾರಿ ಸಾಗುತ್ತಿದ್ದಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬೆಂಕಿಯ ಕೆನ್ನಾಲಗೆಗೆ ಭಾಗಶಃ ಲಾರಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಲಾರಿ ಡ್ರೈವರ್ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಕಿತ್ತೂರು ಅಗ್ನಿಶಾಮಕ ದಳದ ಅಧಿಕಾರಿಗಳಾದ ಸಿಎಫ್ಓ ರವಿಪ್ರಸಾದ ಎಸ್, ಎ.ಎಫ್. ಎಸ್. ಓ ವಿಶ್ವನಾಥ್ ಕೋಲಕಾರ, ಬಸವರಾಜ ಇಂಚಲ, ಗೋಪಿನಾಥ ಜಿ. ಎಸ್. ಮಂಜುನಾಥ ಪಾಟೀಲ ನಾಗೇಂದ್ರ ಸೂರ್ಯವಂಶಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.