ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Ravi Talawar
WhatsApp Group Join Now
Telegram Group Join Now

ನವದೆಹಲಿ01: ಖ್ಯಾತ ಧಾರಾವಾಹಿ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಪ್ರಗತಿಗಾಗಿ ಕೆಲಸ ಮಾಡಲು ಪಕ್ಷ ಸೇರಿದ್ದೇನೆ ಎಂದು ತಿಳಿಸಿದ್ದಾರೆ.

ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ರಾಷ್ಟ್ರೀಯ ಮಾಧ್ಯಮ ವಿಭಾಗದ ಉಸ್ತುವಾರಿ ಅನಿಲ್ ಬಲುನಿ ಸೇರಿದಂತೆ ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ ರೂಪಾಲಿ ಬಿಜೆಪಿ ಸೇರಿದರು. ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ರೂಪಾಲಿ, ಎಲ್ಲರನ್ನೂ ಬಿಜೆಪಿಯತ್ತ ಆಕರ್ಷಿಸುವ ಏಕೈಕ ವ್ಯಕ್ತಿತ್ವ ಪ್ರಧಾನಿ ಮೋದಿ. ಅವರ ಕಾರ್ಯ ವೈಖರಿ ಮತ್ತು ನಮ್ಮ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ರೀತಿ ಪ್ರತಿಯೊಬ್ಬರಿಗೂ ಸ್ಫೂರ್ತಿಯಾಗಿದೆ. ಅಭಿವೃದ್ಧಿಯ ಈ ‘ಮಹಾಯಜ್ಞ’ವನ್ನು ನೋಡಿದಾಗ ನಾನು ಸಹ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ನನಗೆ ಅನಿಸಿತು. ಹಾಗಾಗಿ ಬಿಜೆಪಿಗೆ ಸೇರಿದ್ದೇನೆ’ ಎಂದು ಹೇಳಿದ್ದಾರೆ.ನಾನು ಸಹ ‘ಮೋದಿ ಸೇನೆ’ಗೆ ಸೇರ್ಪಡೆಯಾಗುವ ಮೂಲಕ ದೇಶಕ್ಕೆ ನನ್ನದೇ ಆದ ಕೊಡುಗೆ ನೀಡಲು ಬಯಸುತ್ತೇನೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article