ಕರ್ನಾಟಕದ ಪೈಪೋಟಿಯುತ ಕ್ಷೇತ್ರಗಳ ಮೇಲೆ ಬಿಜೆಪಿ ತೀವ್ರಾ ನಿಗಾ: ಭಿನ್ನಮತೀಯ ನಾಯಕರ ಮೇಲೆ ಅಮಿತ್ ಶಾ ಹದ್ದಿನ ಕಣ್ಣು!

Ravi Talawar
WhatsApp Group Join Now
Telegram Group Join Now

ಬೆಂಗಳೂರು,ಏ.06: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಬಿಜೆಪಿಯ ದೆಹಲಿ ತಂಡವು ಕೆಲವು ಪೈಪೋಟಿಯುತ ಕ್ಷೇತ್ರಗಳ ಮೇಲೆ ತೀವ್ರಾ ನಿಗಾ ಇಡುತ್ತಿದೆ.

ರಾಜ್ಯದಲ್ಲಿ ಬಿಜೆಪಿ 25 ಸಂಸದರು, ಒಬ್ಬರು ಸ್ವತಂತ್ರ, ಒಬ್ಬರು ಜೆಡಿಎಸ್ ಮತ್ತು ಒಬ್ಬರು ಕಾಂಗ್ರೆಸ್ ಸಂಸದರಿದ್ದಾರೆ. ಬಿಜೆಪಿ ಈ ಬಾರಿ 25 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಮೂರು ಸ್ಥಾನಗಳನ್ನು ಮೈತ್ರಿಕೂಟ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು ಮಂದಿಯನ್ನು ಬದಲಿಸಲಾಗಿದ್ದು, ಟಿಕೆಟ್ ಸಿಗದ ನಾಯಕರು ಹಾಗೂ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ ಎಂದು ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ. ಅವರಲ್ಲಿ ಕೆಲವರು ನಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿಲ್ಲ, ಹೀಗಾಗಿ ಪಕ್ಷದ ಅಭ್ಯರ್ಥಿಗಳು ಮುಜುಗರಕ್ಕೀಡಾಗುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಕೆಲವು ಅತೃಪ್ತ ನಾಯಕರನ್ನು ಬಿಜೆಪಿಯ ಹಿರಿಯ ನಾಯಕರಾದ ಬಿಎಸ್ ಯಡಿಯೂರಪ್ಪ, ಪ್ರಲ್ಹಾದ್ ಜೋಶಿ ಮತ್ತು ಇತರ ನಾಯಕರು ಮನವೊಲಿಸಿದ್ದಾರೆ, ಸದ್ಯ ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೆಲವು ಭಿನ್ನಮತೀಯ ನಾಯಕರಿಗೆ ಎಚ್ಚರಿಕೆ ನೀಡಿದ್ದರು.ಪಕ್ಷದ ಕೆಲವು ನಾಯಕರೊಂದಿಗೆ ಅಮಿತ್ ಸಂಧಾನ ನಡೆಸಿದ್ದಾರೆ. ರಾಜ್ಯ ನಾಯಕರಿಗಿಂತ ಪ್ರತಿ ಕ್ಷೇತ್ರದಲ್ಲಿನ ಭಿನ್ನಾಭಿಪ್ರಾಯದ ಬಗ್ಗೆ ಅಮಿತ್ ಶಾ ಅವರಿಗೆ ಹೆಚ್ಚಿನ ಮಾಹಿತಿಯಿದೆ ಎಂದು ಮೂಲಗಳು ತಿಳಿಸಿವೆ.

WhatsApp Group Join Now
Telegram Group Join Now
Share This Article