ಬಳ್ಳಾರಿ,ಏ.18 ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರನ್ನು ಮತದಾನಕ್ಕಾಗಿ ಪ್ರೇರೇಪಿಸಲು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಬಳ್ಳಾರಿ ಜಿಲ್ಲೆಯ ಜಿಲ್ಲಾ ಸ್ವೀಪ್ ಐಕಾನ್ ಆಗಿ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
                                                             
ನಂದಿನಿ ತಂದೆ ಯಲ್ಲಪ್ಪ  (ಅಥ್ಲೆಟಿಕ್), ಎಸ್.ಕೆ.ಆರ್.ಜಿಲಾನ್ ಭಾಷಾ ತಂದೆ ಫಕೃದ್ದೀನ್ (ನೃತ್ಯಗಾರರು), ಕವಿತಾ ತಂದೆ ರಾಮನಗೌಡ (ರಾಷ್ಟ್ರೀಯ ಪ್ಯಾರಾ ಸ್ವಿಮ್ಮಿಂಗ್ ಚಾಂಪಿಯನ್‍ಶಿಪ್) ಇವರನ್ನು ನೇಮಕ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.