ಗದಗ: ಮುಳಗುಂದ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾಗಿ (ಮಹಿಳಾ) ಶ್ರೀಮತಿ ರೇಖಾ ಬೋಳನವರ ಅವರನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹಮ್ಮದ ಹ್ಯಾರೀಸ್ ನಲಪಾಡ್ ಅವರ ಆದೇಶದ ಮೇರೆಗೆ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ನೇಮಿಸಿದ್ದಾರೆ. ಇವರಿಗೆ ಗದಗ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಎಚ್.ಕೆ. ಪಾಟೀಲ ಅವರು ಆದೇಶ ಪತ್ರವನ್ನು ಈಚೆಗೆ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಾಲಯದಲ್ಲಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಸ್ತುವಾರಿಯಾದ ಮಂಜುನಾಥ ಮಣಿಶೆಟ್ಟಿ, ಕಾರ್ಯದರ್ಶಿ ರಾಮಕೃಷ್ಣ ರೊಳ್ಳಿ, ನಗರಸಭೆ ಮಾಜಿ ಅಧ್ಯಕ್ಷರಾದ ಬಿ.ಬಿ. ಅಸೂಟಿ, ಗದಗ ಜಿಪಂ ಮಾಜಿ ಅಧ್ಯಕ್ಷರಾದ ಸಿದ್ಧಲಿಂಗೇಶ್ವರ ಪಾಟೀಲ, ಗದಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನೀಲಮ್ಮ ಬೋಳನವರ, ಗದಗ ಜಿಲ್ಲಾ ಸಾಮಾಜಿಕ ಜಾಲತಾಣ ಅಧ್ಯಕ್ಷ ರಮೇಶ ಹೊನ್ನಿನಾಯ್ಕರ, ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಉದಯಗೌಡ ವೀರನಗೌಡ್ರ, ವಿಜಯಕುಮಾರ ಚಲವಾದಿ, ಗದಗ ಜಿಲ್ಲಾ ಯುವ ಕಾಂಗ್ರೆಸ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಎಚ್. ಪಾಟೀಲ, ಮುಳಗುಂದ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಜ್ಜಣ್ಣ ಹುಗ್ಗೆಣ್ಣವರ, ಗದಗ-ಬೆಟಗೇರಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸರ್ಫರಾಜ ಬಬರ್ಚಿ ಸೇರಿದಂತೆ ಅನೇಕರು ಇದ್ದರು.