ಎಸ್​​ಐಟಿ ದಾಖಲಿಸುವ ಪ್ರಕರಣಗಳ ಸಂಬಂಧ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

Ravi Talawar
WhatsApp Group Join Now
Telegram Group Join Now

ಬೆಂಗಳೂರು08: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳ ಸಂಬಂಧ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಎಸ್​​ಐಟಿ ಮುಂದೆ ದಾಖಲಾಗುವ ಪ್ರಕರಣಗಳನ್ನು ನಡೆಸಲು ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಶ್ರೀಮತಿ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

WhatsApp Group Join Now
Telegram Group Join Now
Share This Article