This is the title of the web page
Left Banner (Left Skyscraper)
Right Banner (Right Skyscraper)

ಪ್ರಕಾಶ ಹುಕ್ಕೇರಿ ಮತ್ತು ಸುನೀಲ ಸಂಕ ಪರವಾಗಿ ಅಭೂತಪೂರ್ವ ಸ್ಪಂದನೆ : ಅರವಿಂದ ದಳವಾಯಿ

ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ

0 37

ಮೂಡಲಗಿ ಜೂ.10 : ಕಳೆದ ಕೆಲವು ದಿನಗಳಿಂದ ಮತಕ್ಷೇತ್ರಾಧ್ಯಂತ ವಾಯವ್ಯ ಪದವಿಧರ ಹಾಗೂ ಶಿಕ್ಷಕರ ವಿಧಾನ ಪರಿಷತ್ತ ಸದಸ್ಯರ ಚುನಾವಣೆ ಅಂಗವಾಗಿ ಕಾಂಗ್ರೇಸ್ ಪಕ್ಷದ ನಿಷ್ಠಾವಂತ ಅಭ್ಯರ್ಥಿಗಳಾದ ಪ್ರಕಾಶ ಹುಕ್ಕೇರಿ ಮತ್ತು ಸುನೀಲ ಸಂಕ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತಿದ್ದು, ಮತದಾರರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ಹೇಳಿದರು

ಅವರು ಪಟ್ಟಣದ ವಿವಿಧ ಶಾಲಾ ಕಾಲೇಜು,ಸಂಘ ಸAಸ್ಥೆಗಳಿಗೆ ತೆರಳಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿ, ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತ ಬೆಳಗಾವಿ, ಬಾಗಲಕೋಟ, ವಿಜಯಪೂರ ಜಿಲ್ಲೆಗಳ ವ್ಯಾಪ್ತಿಯ ವಾಯುವ್ಯ ಪದವಿಧರ ಹಾಗೂ ಶಿಕ್ಷಕರ ಮತಕ್ಷೇತ್ರವು ಬಹು ವಿಸ್ತಾರವಾಗಿದ್ದು, ಪ್ರಜ್ಞಾವಂತ ಮತದಾರರು ಮುಂದಿನ ಸಾರ್ವತ್ರಿಕ ಚುನಾವಣೆಗೆ ದಿಕ್ಸೂಚಿಯಂತಿರುವ ಈ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ರಾಜಕೀಯವಾಗಿ ಸಬಲರಾಗಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಜೊತೆಗೆ ಎದುರಾಳಿ ಪಕ್ಷದವರು ನಮ್ಮ ಅಭ್ಯರ್ಥಿಗಳ ಮನೋಬಲ ಕುಗ್ಗಿಸಲು ಏನೇ ಟೀಕೆ-ಟಿಪ್ಪಣಿ ಮಾಡಿದರು ಅದು ಫಲಿಸುವುದಿಲ್ಲ ಎಂದು ಕುಟುಕಿದರು.

ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿ ಕಾಂಗ್ರೇಸ್ ಕಾರ್ಯಕಾರಣಿ ಸಮಿತಿ ಸದಸ್ಯ ಬಿ.ಪಿ ನಾಯಕ, ಕಾಂಗ್ರೇಸ್ ಪಕ್ಷದ ಹಿರಿಯ ಉಪಾಧ್ಯಕ್ಷ ಸುರೇಶ ಮಗದುಮ, ಪ್ರಧಾನ ಕಾರ್ಯದರ್ಶಿ ರವಿ ತುಪ್ಪದ, ಸೇರಿದಂತೆ ಇನ್ನು ಅನೇಕ ಕಾಂಗ್ರೇಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

You might also like
Leave a comment