Hasirukranti
ಸಿನಿಮಾ

ರಾಘವೇಂದ್ರ ರಾಜ್‍ಕುಮಾರ್ ಈಗ ನಿವೃತ್ತ ಕ್ಯಾಪ್ಟನ್ 

   ರಾಘವೇಂದ್ರ ರಾಜ್‍ಕುಮಾರ್ ಅಭಿನಯದ ರಾಜತಂತ್ರ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದುಷ್ಟಶಕ್ತಿಗಳನ್ನು ತನ್ನ ಬುದ್ಧಿಶಕ್ತಿ ಮತ್ತು ತಂತ್ರಗಾರಿಕೆಯಿಂದ ಮಣಿಸುವ ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್‍ಕುಮಾರ್ ಅವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
      ಈ ಚಿತ್ರಕ್ಕೆ  ಛಾಯಾಗ್ರಾಹಕರಾಗಿದ್ದ ಪಿ.ವಿ.ಆರ್.ಸ್ವಾಮಿ ಈಗ ಕ್ಯಾಮರಾ ಹಿಡಿಯುವ ಜೊತೆಗೆ ಇದೇ ಮೊದಲಬಾರಿಗೆ ನಿರ್ದೇಶಕನ ಸ್ಥಾನವನ್ನು ಅಲಂಕರಿಸಿದ್ದಾರೆ. ಹಿರಿಯನಟ ರಾಘವೇಂದ್ರ ರಾಜ್‍ಕುಮಾರ್ ಅವರ ಜೊತೆಗೆ ಹಿರಿಯ ಕಲಾವಿದರಾದ ದೊಡ್ಡಣ್ಣ, ಭವ್ಯ, ಶ್ರೀನಿವಾಸಮೂರ್ತಿ, ಶಂಕರ್‍ಅಶ್ವಥ್, ರಂಜನ್‍ಹಾಸನ್, ಮುನಿರಾಜು, ನೀನಾಸಂ ಅಶ್ವಥ್ ಹಲವಾರು ಪ್ರಮುಖ ಕಲಾವಿದರು  ಅಭಿನಯಿಸುತ್ತಿದ್ದಾರೆ.
   ರಾಜತಂತ್ರ ಚಿತ್ರದ ಮುಹೂರ್ತ ದೃಶ್ಯಕ್ಕೆ   ದೊಡ್ಡಣ್ಣ  ಕ್ಲಾಪ್ ಮಾಡಿದರೆ,  ಸಂಗೀತ ನಿರ್ದೇಶಕ ಹಂಸಲೇಖಾ ಕ್ಯಾಮೆರಾ ಚಾಲನೆ ಮಾಡಿದರು.  ವಿಶ್ವ ಡಿಜಿಟಲ್ ಮೀಡಿಯಾ ಮೂಲಕ ವಿಜಯಭಾಸ್ಕರ್ ಹರಪನಹಳ್ಳಿ, ಜೆ.ಎಂ.ಪ್ರಹ್ಲಾದ್ ಹಾಗೂ ಪಿ.ಆರ್.ಶ್ರೀಧರ್  ಬಂಡವಾಳ ಹೂಡುತ್ತಿದ್ದಾರೆ.
     ರಾಘವೇಂದ್ರ ರಾಜ್‍ಕುಮಾರ್ ಮಾತನಾಡಿ ಇಲ್ಲಿ ನಾನೊಬ್ಬ ನಿವೃತ್ತ ಮಿಲಿಟರಿ ಕ್ಯಾಪ್ಟನ್ ಆಗಿ ನಟಿಸುತ್ತಿದ್ದೇನೆ. ಹೊರಗಿನಿಂದ ಬರುವ ಶತೃಗಳಿಂದ ದೇಶವನ್ನು ರಕ್ಷಿಸುತ್ತಿದ್ದ ಆತ, ದೇಶದ ಒಳಗೆ ಬಂದಾಗ ಯಾವರೀತಿ ಸಮಾಜ, ದೇಶವನ್ನು ದುಷ್ಟರಿಂದ  ರಕ್ಷಿಸುತ್ತಾನೆ ಎಂದು ನನ್ನ ಪಾತ್ರದ ಮೂಲಕ ತೋರಿಸುತ್ತಿದ್ದಾರೆ. ಇದೇ ಮೊದಲಬಾರಿಗೆ ನಾನಿಂಥ ಪಾತ್ರ ಮಾಡುತ್ತಿರುವುದು. ಇಲ್ಲಿ ಕ್ಯಾಪ್ಟನ್ ರಾಜನೂ ಹೌದು, ರಾಮನೂ ಹೌದು, ಸೈನ್ಯದಿಂದ ಹೊರಬಂದ ಮೇಲೂ ತನ್ನ ಕರ್ತವ್ಯ ಮುಗಿದಿಲ್ಲವೆಂದುಕೊಂಡು ಜವಾಬ್ದಾರಿ ನಿಭಾಯಿಸುವ ವ್ಯಕ್ತಿ. ಇಲ್ಲಿ ಕೆಲಸ ಮಾಡುವುದು ತಂತ್ರವೋ ಮಂತ್ರವೋ ಅನ್ನೋದು ಚಿತ್ರ ನೋಡಿದಾಗ ತಿಳಿಯುತ್ತೆ ಎಂದು ಹೇಳಿದರು.
     ಕತೆ, ಚಿತ್ರಕತೆ, ಸಂಭಾಷಣೆ ಹಾಗೂ ಸಾಹಿತ್ಯ ರಚಿಸಿರುವ ಜೆ ಎಂ ಪ್ರಹ್ಲಾದ್  ಅವರು  ಕಥೆಯ ವಿಶೇಷತೆ ಕುರಿತು ಮಾತನಾಡುತ್ತ  ಬೌದ್ದಿಕ  ಶಕ್ತಿಯ ಪ್ರತಿನಿಧಿಯಾಗಿ ರಾಘಣ್ಣ ಅವರು ಕಾಣಿಸಿಕೊಂಡಿದ್ದಾರೆ. ಈಗಿನ ಕಾಲಘಟ್ಟದಲ್ಲೇ  ನಡೆಯುವ  ಯೂನಿವರ್ಸಲ್ ಕಥೆಯಿದು ಎಂದು ಹೇಳಿದರು.  ನಿರ್ದೇಶಕ ಪಿವಿಆರ್ ಸ್ವಾಮಿ ಮಾತನಾಡಿ, ನಾನು ಇಪ್ಪತ್ತು ವರ್ಷಗಳ ಹಿಂದೆ   ಪುಟ್ಟ ಹಳ್ಳಿಯಿಂದ ಬಂದೆ. ನನ್ನ ಈ ಪ್ರಯತ್ನದ  ಹಿಂದೆ ಹಲವಾರು ಶಕ್ತಿಗಳಿವೆ. ಅಮ್ಮನ ಮನೆ ನಂತರ ರಾಗಣ್ಣ ಅವರ ಜೊತೆ ನನ್ನ  ಎರಡನೇ ಚಿತ್ರವಿದು.ಫೈಟ್ಸ್, ಸಾಂಗ್ಸ್ ಎಲ್ಲಾ ಇರುವ ಕಮರ್ಷಿಯಲ್ ಚಿತ್ರವಿದು. ಇದೇ ಸೋಮವಾರದಿಂದ ಶೂಟಿಂಗ್ ಆರಂಭಿಸಿ ಬೆಂಗಳೂರು, ನೆಲಮಂಗಲ ಸುತ್ತಮುತ್ತ 15 ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸುತ್ತೇವೆ  ಎಂದು ತಿಳಿಸಿದರು.
     ಈ ಚಿತ್ರದ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡುತ್ತಿರುವ  ಶ್ರೀಸುರೇಶ್,  ರಾಗಣ್ಣ ಅವರ ಚಿತ್ರಕ್ಕೆ ಸಂಗೀತ ಮಾಡುತ್ತಿರುವ ಖುಷಿಯಿದೆ. ಚಿತ್ರದಲ್ಲಿ ಒಂದು ಮಾಸ್ ಹಾಗೂ ಎರಡು ಬಿಟ್ ಸಾಂಗ್ ಇದೆ ಎಂದು ಹೇಳಿದರು. ಎನ್.ನಾಗೇಶ್ ಅವರ ಸಂಕಲನ, ವೈಲೆಂಟ್ ವೇಲು-ರಾಮ್‍ದೇವ್  ಸಾಹಸ ಸಂಯೋಜನೆ  ಚಿತ್ರಕ್ಕಿದೆ.

Related posts

ರಾಘವೇಂದ್ರ ರಾಜಕುಮಾರ್ ಅಭಿನಯದ ಆಡಿಸಿದಾತ ಚಿತ್ರದ ಟೀಸರ್ ಬಿಡುಗಡೆ

Siddu Naduvinmani

ದಿಯಾ ನಾಯಕ ಪೃಥ್ವಿ ಅಂಬರ್ ನ ‘‘ಲೈಫ್ ಈಸ್ ಬ್ಯೂಟಿಫುಲ್’’

Siddu Naduvinmani

ಉಪ್ಪಿ ಹುಟ್ಟುಹಬ್ಬಕ್ಕೆ ಕಬ್ಜ ಥೀಮ್ ಪೋಸ್ಟರ್ ಬಿಡುಗಡೆ

Hasiru Kranti

Leave a Comment