Hasirukranti
leadingnews ಬೆಂಗಳೂರು ನಗರ ರಾಜ್ಯ

ಪ್ರವಾಹ : ತುರ್ತು ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ

ಬೆಂಗಳೂರು, ಅ.16 : ಭೀಕರ ಮಳೆ, ಪ್ರವಾಹಕ್ಕೆ ತತ್ತರಿಸಿರುವ ಕಲಬುರ್ಗಿ, ಯಾದಗಿರಿ, ರಾಯಚೂರು, ಬೀದರ್, ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರ 85.49 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಮನೆ ಮಠ ಕಳೆದುಕೊಂಡು ಈಗಾಗಲೇ ಜನರು ನಿರಾಶ್ರಿತ ಶಿಬಿರಗಳನ್ನು ಸೇರಿದ್ದಾರೆ. ಅವರಿಗೆ ಅಗತ್ಯ ಪರಿಹಾರದ ಕಾರ್ಯ ಅಗತ್ಯವಿದೆ. ಈ ಹಿನ್ನಲೆ ಅಗತ್ಯ ಸಂಪನ್ಮೂಲ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಜಿಲ್ಲಾಧಿಕಾರಿಗಳಿಗೆ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳು, ಪೆÇಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಮಳೆಯಿಂದ ಉಪನದಿಗಳ ಒಳಹರಿವು ಹೆಚ್ಚಳವಾಗಿದ್ದು, ಭೀಮಾ ಮತ್ತು ಇತರೆ ಉಪನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹ ಹೆಚ್ಚಾಗಿದೆ. ಈಗಾಗಲೇ ಹಲವು ಗ್ರಾಮಗಳು ಪ್ರವಾಹದಲ್ಲಿ ಮುಳುಗಿದೆ. ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಅವರಿಗೆ, ಅಗತ್ಯ ಸೌಕರ್ಯ, ಉತ್ತಮ ಆಹಾರ ಪೂರೈಕೆ ಮಾಡಬೇಕು ಎಂದು ಆದೇಶಿಸಿದ್ದಾರೆ.

ಪ್ರವಾಹದ ಜೊತೆಗೆ ಕೊರೋನಾ ಸೋಂಕು ಕೂಡ ಗಮನದಲ್ಲಿರಿಸಿ ಕೆಲಸ ಮಾಡುವುದು ಅನಿವಾರ್ಯವಾಗಿದೆ. ಇದರಿಂದಾಗಿ ಕಾಳಜಿ ಕೇಂದ್ರದಲ್ಲಿ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಬೇಕು. ಜೊತೆಗೆ ಕೇಂದ್ರಕ್ಕೆ ವೈದ್ಯರು ಭೇಟಿ ನೀಡಿ ತಪಾಸಣೆಗೆ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ. ಈ ವೇಳೆ ಯಾರಲ್ಲಿಯಾದರೂ ಸೋಂಕಿನ ಲಕ್ಷಣ ಕಂಡು ಬಂದರೆ ಅವರನ್ನು ತಕ್ಷಣಕ್ಕೆ ಸ್ಥಳಾಂತರಿಸುವಂತೆ ಸೂಚಿಸಿದ್ದಾರೆ.ಪ್ರವಾಹ ನಿರ್ವಹಣೆ ವಿಚಾರದಲ್ಲಿ ಯಾವುದೇ ದೂರು ಬರಬಾರದು. ಜನರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ. ಜನರ ನೋವಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಪ್ರವಾಹದಲ್ಲಿ ಈಗಾಗಲೇ 517 ಜಾನುವಾರು ಸಾವನ್ನಪ್ಪಿದ್ದು, ಬದುಕುಳಿದ ಜಾನುವಾರುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅವುಗಳನ್ನು ಸುರಕ್ಷಿತ ತಂಡಕ್ಕೆ ಸ್ಥಳಾಂತರಿಸುವ ಕಾರ್ಯ ನಡೆದಿದ್ದು, ಅವುಗಳಿಗೆ ಮೇವು ಪೂರೈಕೆ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

Related posts

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಳೆ ಡಾ.ಕುಬೇರಪ್ಪ ನಾಮಪತ್ರ ಸಲ್ಲಿಕೆ

Siddu Naduvinmani

ಬೆಳಗಾವಿಯಲ್ಲಿ 14 ಬೆಂಗಳೂರಿನಲ್ಲಿ 3 ಒಟ್ಟು ರಾಜ್ಜದಲ್ಲಿಂದು 22 ಸೋಂಕಿನ ಪ್ರಕರಣ ದಾಖಲಾಗಿವೆ

Hasiru Kranti

ಕೊರೊನಾ ಸೋಂಕಿಗೆ ಪತಂಜಲಿಯಿಂದ ಆಯುರ್ವೇದಿಕ್ ಔಷಧ ಬಿಡುಗಡೆ

Hasiru Kranti

Leave a Comment