Hasirukranti
leadingnews ಮೈಸೂರು ರಾಜ್ಯ

ಅನುದಾನದ ಕೊರತೆ ಇಲ್ಲ, ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಲಾಗುವುದು : ಬಿಎಸ್‍ವೈ

 

ಮೈಸೂರು, ಅ.17: ಪ್ರವಾಹದಿಂದ ಮನೆ ಕಳೆದುಕೊಂಡ ಜನರಿಗೆ ತಕ್ಷಣಕ್ಕೆ 10 ಸಾವಿರ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ. ಇನ್ನು ಅನುದಾನದ ಕೊರತೆ ಇಲ್ಲ, ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡಲಾಗುವುದು ಎ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.

ಮೈಸೂರಿನಲ್ಲಿ ನಾಡ ಹಬ್ಬ ದಸರಾ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರದಿಂದ ಪರಿಹಾರ, ನೆರವು ಪಡೆಯುವ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವರ ಜೊತೆ ಮಾತುಕತೆ ನಡೆಸಲಾಗಿದೆ ಎಂದರು.

ಇನ್ನು ಉತ್ತರ ಕರ್ನಾಟಕದ ನೆರೆ ಪರಿಸ್ಥಿತಿಯ ಕುರಿತು ಪ್ರತಿಕ್ರಿಯಿಸಿ. 12 ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿ ಮಾಹಿತಿ ಪಡೆಯಲಾಗಿದೆ. 10 ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ವಾರದೊಳಗೆ ಅಂದಾಜು ನಷ್ಟದ ವರದಿ ಸಲ್ಲಿಸುವಂತೆ ಡಿಸಿಗಳಿಗೆ ಸೂಚಿಸಿದ್ದೇನೆ ಎಂದರು. ಅನುದಾನದ ಕೊರತೆ ಇಲ್ಲ, ಎನ್ಡಿಆರ್‍ಎಫ್ ನಿಧಿಯಲ್ಲಿ ಹಾನಿಯಾದವರಿಗೆ, ಮನೆ ಕಳೆದುಕೊಂಡವರಿಗೆ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ತಿಳಿಸಿದರು.

ಕಳೆದ ರಾತ್ರಿ ಪ್ರಧಾನಿ ಮೋದಿ ಅವರು ತಮ್ಮೊಂದಿಗೆ ಮಾತುಕತೆ ನಡೆಸಿದ್ದು, ಪರಿಸ್ಥಿತಿಯ ಪರಾಮರ್ಶೆ ನಡೆಸಿದ್ದಾರೆ. ಸನ್ನಿವೇಶವನ್ನು ನಿರ್ವಹಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದರು.

Related posts

ಕೋವಿಡ್-೧೯: ಬಿಮ್ಸ್ ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಹಿರೇಮಠ ಆದೇಶ

Siddu Naduvinmani

ವಾರಿಯರ್ಸಗಳಾಗಿ ಹೊರಾಡಿದವರಿಗೆ ಸಚಿವ ರಮೇಶ ಜಾರಕಿಹೋಳಿಯವರಿಂದ ಜೀವ ರಕ್ಷಕ ಕೀಟ್ ವಿತರಣೆ

Siddu Naduvinmani

ರಾಜ್ಯದಲ್ಲಿಂದು ಮತ್ತೆ 4120 ಜನರಿಗೆ ಸೋಂಕು : 91 ಬಲಿ

Hasiru Kranti

Leave a Comment