Hasirukranti
ಬಳ್ಳಾರಿ

ಈ ಬಾರಿ ಸರಳ,ಸಾಂಕೇತಿಕ ಕರ್ನಾಟಕ ರಾಜ್ಯೋತ್ಸವ:ಡಿಸಿ ನಕುಲ್

ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆ

ಬಳ್ಳಾರಿ, ಅ.17: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ನ.1ರಂದು ಕರ್ನಾಟಕ ರಾಜ್ಯೋತ್ಸವವನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸ್ತಬ್ಧಚಿತ್ರ, ಮೆರವಣಿಗೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಈ ಬಾರಿ ಅವಕಾಶ ಮಾಡಿಕೊಡಲಾಗಿಲ್ಲ ಎಂದು ಹೇಳಿದ ಡಿಸಿ ನಕುಲ್ ಅವರು ನ.1ರಂದು ಬೆಳಗ್ಗೆ 9ಕ್ಕೆ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರು ನೆರವೇರಿಸಲಿದ್ದಾರೆ. ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಮತ್ತು ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಅವರು ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು.

ಎಲ್ಲ ಜಿಲ್ಲಾಮಟ್ಟದ ಕಚೇರಿಗಳಿಗೆ ದೀಪಾಲಂಕಾರದ ವ್ಯವಸ್ಥೆ ಮಾಡಬೇಕು.ಎಚ್.ಆರ್.ಗವಿಯಪ್ಪ ವೃತ್ತದಿಂದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ದೀಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳು ಮುನ್ಸಿಪಲ್ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದ ಡಿಸಿ ನಕುಲ್ ಅವರು, ಕನ್ನಡಪರ ಸಂಘಟನೆಗಳ ಮುಖಂಡರು ತಮ್ಮ ಕಾರ್ಯಕರ್ತರೊಂದಿಗೆ ಕಾರ್ಯಕ್ರಮಕ್ಕೆ ಬಂದು ಯಶಸ್ವಿಗೊಳಿಸಬೇಕು ಎಂದರು.

ಕನ್ನಡ ಜಾಗೃತಿ ಸಭೆ ಕರೆಯುವುದು ಸೇರಿದಂತೆ ವಿವಿಧ ಕನ್ನಡ ನಾಡು-ನುಡಿಗೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರರು ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

Related posts

ಬಳ್ಳಾರಿಯಲ್ಲಿ ಸರಕಾರಿ ಜಮೀನು ಅನಧಿಕೃತ ಒತ್ತುವರಿ ತೆರವು

Siddu Naduvinmani

ಕಂಪ್ಯೂಟರ್ ತರಬೇತಿ ಪಡೆದವರಿಗೆ ಜಿಲ್ಲಾಡಳಿತದಿಂದ ಲ್ಯಾಪ್‍ಟ್ಯಾಪ್ : ಜಿಲ್ಲಾಧಿಕಾರಿ ನಕುಲ್

Siddu Naduvinmani

ಬಳ್ಳಾರಿ ರೈಲ್ವೆ ನಿಲ್ದಾಣದಿಂದ ತೆರಳಿದ ವಲಸಿಗರಿಗೆ ಶುಭಕೋರಿದ ಜಿಲ್ಲಾಡಳಿತ

Siddu Naduvinmani

Leave a Comment