Hasirukranti
leadingnews ಬೆಂಗಳೂರು ನಗರ ರಾಜ್ಯ

ಅ.21 ರಂದು ನೆರೆ ಪೀಡಿತ ಜಿಲ್ಲೆಗಳದಲ್ಲಿ ಸಿಎಂ ವೈಮಾನಿಕ ಸಮೀಕ್ಷೆ

 

ಬೆಂಗಳೂರು, ಅ.18 : ಮಳೆಯ ಅಬ್ಬರಕ್ಕೆ ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಭಾರಿ ನಷ್ಟವುಂಟಾಗಿದ್ದು, ಈ ಜಿಲ್ಲೆಗಳಲ್ಲಿ ಅ.21 ರಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ.

ಪ್ರವಾಹದಿಂದ 4 ಜಿಲ್ಲೆಗಳ ಹಲವು ಗ್ರಾಮಗಳು ಸಂಪೂರ್ಣ ಮತ್ತು ಭಾಗಶಃ ಮುಳುಗಿವೆ. ಜಿಲ್ಲಾಡಳಿತದಿಂದ ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ. ನೇರವಾಗಿ ಪರಿಸ್ಥಿತಿ ಅರಿಯುವ ಉದ್ದೇಶದಿಂದ ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಾಯುಭಾರ ಕುಸಿತದಿಂದ ಈ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಇದರೊಂದಿಗೆ ಮಹಾರಾಷ್ಟ್ರದ ಜಲಾಶಯದಿಂದ ಕೃಷ್ಣಾ ಮತ್ತು ಭೀಮಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಬಿಡಲಾಗಿದೆ. ಇದರಿಂದ ಈ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

Related posts

ಇನ್ನುಮುಂದೆ ಮಾಸ್ಕ್ ಧರಿಸದವರಿಗೆ 1 ಸಾವಿರ ರೂ ದಂಡ; ಡಾ.ಕೆ. ಸುಧಾಕರ್

Siddu Naduvinmani

ಬೆಳಗಾವಿಯಲ್ಲಿ ಬೃಹತ್ ಪ್ರತಿಭನೆ – ಹಲವು ರೈತರನ್ನು ವಶಕ್ಕೆ ಪಡೆದ ಪೊಲೀಸರು

Siddu Naduvinmani

ಸಿಡಿಲಿಗೆ 45ಕ್ಕೂ ಹೆಚ್ಚು ಕುರಿಗಳ ಸಾವು : ಸ್ಥಳಕ್ಕೆ ಶಾಸಕ ಆನಂದ ಮಾಮನಿ ಭೇಟಿ

Siddu Naduvinmani

Leave a Comment