Hasirukranti
leadingnews ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಸುಸಜ್ಜಿತ ಪರಿಹಾರ(ಕಾಳಜಿ) ಕೇಂದ್ರ ಸ್ಥಾಪನೆ: ಸಚಿವ ಆರ್.ಅಶೋಕ 

 

 

ಬೆಳಗಾವಿ, ಅ.19: ಪ್ರವಾಹ ಮತ್ತಿತರ ತುರ್ತು ಸಂದರ್ಭಗಳಲ್ಲಿ ಜನರಿಗೆ ಸುರಕ್ಷಿತ ನೆಲೆ ಒದಗಿಸುವುದಕ್ಕಾಗಿ ಬೆಳಗಾವಿ ಜಿಲ್ಲೆಯಲ್ಲಿ ಸುಸಜ್ಜಿತ ಪರಿಹಾರ(ಕಾಳಜಿ) ಕೇಂದ್ರ ಸ್ಥಾಪನೆಗೆ ಕ್ರಮ‌ಕೈಗೊಳ್ಳಲಾಗುವುದು ಎಂದು ಸಚಿವ ಆರ್.ಅಶೋಕ ಹೇಳಿದರು.

ಸೋಮವಾರ (ಅ.19) ಬೆಳಿಗ್ಗೆ ನಗರಕ್ಕೆ ಆಗಮಿಸಿದ ಸಚಿವರು, ಮೊದಲಿಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಭೆ ನಡೆಸಿದರು. ಬಳಿಕ ಅತಿವೃಷ್ಟಿ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿಯ ಕುರಿತು ಮಾಹಿತಿಯನ್ನು ಪಡೆದುಕೊಂಡ ಸಚಿವರು, ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಸಚಿವ ಅಶೋಕ್ ಅವರು,  ಈ ಕೇಂದ್ರದಲ್ಲಿ ಅಡುಗೆ ಕೋಣೆ, ಸ್ನಾನಗೃಹಗಳು, ವಸತಿ ಕೋಣೆಗಳನ್ನು ನಿರ್ಮಿಸಲಾಗುವುದು. ಪ್ರಕೃತಿ ವಿಕೋಪ ಸಂದರ್ಭಗಳಲ್ಲಿ ಜನರ ಪುನರ್ವಸತಿಗೆ ಅನುಕೂಲ ಆಗಲಿದೆ ಎಂದು ಸಚಿವ ಆರ್.ಅಶೋಕ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಉಮೇಶ್ ಕತ್ತಿ, ದುರ್ಯೋಧನ ಐಹೊಳೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

ರೈಲ್ವೆಗಾಗಿ ತಯಾರಿಸಿದ ಯಂತ್ರವನ್ನು ವಿಕ್ಷೀಸಿದ ಕೇಂದ್ರ ಸಚಿವ ಸುರೇಶ ಅಂಗಡಿ

Siddu Naduvinmani

ವರುಣನ ಆರ್ಭಟ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

Siddu Naduvinmani

ಮೃತ ಮಹಿಳೆಗೆ ಕೊರಾನಾ ಪಾಸಿಟಿವ್ : ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತ್ತಿರುವ ಅಧಿಕಾರಿಗಳು

Siddu Naduvinmani

Leave a Comment