Hasirukranti
leadingnews ಬೆಳಗಾವಿ

ಅ.21 ರಂದು ಜಿ.ಟಿ.ಟಿ.ಸಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಬೆಳಗಾವಿ, ಅ. 20 ; ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೈಗಾರಿಕಾ ವಸಾಹತು ತರಬೇತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ಆನ್‍ಲೈನ್ (virtual) ಮುಖಾಂತರ ಅಕ್ಟೋಬರ್ 21 ರಂದು ಬೆಳಿಗ್ಗೆ 11:30 ಗಂಟೆಗೆ ನಡೆಯಲಿದೆ.

ಉಪ ಮುಖ್ಯಮಂತ್ರಿಗಳಾದ ಡಾ.ಸಿ. ಅಶ್ವತ್ ನಾರಾಯಣ ಅವರು ನೂತನ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅಥಿತಿಗಳಾಗಿ ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷಣ ಸವದಿ, ಜಲ ಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಶಶಿಕಲಾ ಜೊಲ್ಲೆ, ಕೈಮಗ್ಗ ಮತ್ತು ಜವಳಿ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮಂತ ಪಾಟೀಲ ಅವರು ಉಪಸ್ಥಿತರಿರುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಭಯ ಪಾಟೀಲ ಅವರು ವಹಿಸಲಿದ್ದು, ವಿಶೇಷ ಆಮಂತ್ರಿತರಾಗಿ ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಉಪ ಸಭಾಪತಿ ವಿಶ್ವನಾಥ (ಆನಂದ) ಮಾಮನಿ, ಕರ್ನಾಟಕ ಸರ್ಕಾರ ನವದೆಹಲಿ ಪ್ರತಿನಿಧಿ ಶಂಕರಗೌಡಾ ಪಾಟೀಲ್, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ಆಜೀವ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಮಹೇಶ ಕುಮಠಳ್ಳಿ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Related posts

ಮೂಡಲಗಿ ತಾಲೂಕಿನಲ್ಲಿ ನಾಲ್ವರಿಗೆ ಸೋಂಕು, ಪುರಸಭೆ ಶೀಲ್‍ಡೌನ್

Siddu Naduvinmani

ರಾಮತೀರ್ಥ ನಗರದಲ್ಲಿ ಕ್ವಾರಂಟೈನ್ ಮಾಡಬಾರದೆಂದು ಸ್ಥಳೀಯರು ಆಗ್ರಹ

Siddu Naduvinmani

ಬೆಳಗಾವಿಯಲ್ಲಿ ಇಂದು ಮತ್ತೆ 235 ಜನರಲ್ಲಿ ಸೋಂಕು ಪತ್ತೆ

Hasiru Kranti

Leave a Comment