Hasirukranti
leadingnews ಬೆಳಗಾವಿ

ಮುಂದಿನ ಚುನಾವಣೆಯೂ ಕೂಡ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ನಡೆಯಲಿದೆ : ಶಂಕರಗೌಡ ಪಾಟೀಲ್

ಬೆಳಗಾವಿ, ಅ.26: ರಾಜ್ಯದ ಪ್ರತಿಯೊಬ್ಬ ಸಾಮಾನ್ಯ ಜನರಿಗೂ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೊಳಿಸುವ ಯೋಜನೆ ಹಾಕಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ಚುನಾವಣೆಯೂ ಕೂಡ ಯಡಿಯೂರಪ್ಪ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು . ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಸೋಮವಾರ ನಗರದಲ್ಲಿ ಮಾದ್ಯಮರೊಂದಿಗೆ ಮಾತನಾಡಿದ ಅವರು, ಇನ್ನು ಮೂರು ವರ್ಷ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಇರಲಿದ್ದಾರೆ. ಕರ್ನಾಟಕ ರಾಜ್ಯವನ್ನು ಸುವರ್ಣ ಕರ್ನಾಟಕ ರಾಜ್ಯವನ್ನಾಗಿ ಮಾಡಲಾಗಿದೆ. ಎಂದರು.

ಬೆಳಗಾವಿ ಲೋಕಸಭೆ ಬೈಎಲೆಕ್ಷನ್ ಸಂಬಂಧ ಮಾತನಾಡಿದ ಶಂಕರಗೌಡ ಪಾಟೀಲ್, ನಾವು ಎಲ್ಲರೂ ಸೇರಿ ಸುರೇಶ ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂದು ನಾವು ಹೇಳಿದ್ದೇವೆ. ಅನೇಕರ ಹೆಸರು ಕೇಳಿ ಬರುತ್ತಿದೆ. ಆದ್ರೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೇರಿ ಹಲವು ಹಿರಿಯ ನಾಯಕರು ಸುರೇಶ ಅಂಗಡಿ ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಕು ಎಂಬ ಅಭಿಪ್ರಾಯವನ್ನು ತಿಳಿಸಿದ್ದಾರೆ. ಹೀಗಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವ ಬದ್ಧ ಎಂದರು.

ಪ್ರಕಾಶ ಹುಕ್ಕೇರಿ ಹೇಳಿಕೆ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಶಂಕಗರೌಡ ಪಾಟೀಲ್ ಈಗಾಗಲೇ ಸತೀಶ ಜಾರಕಿಹೊಳಿ ಅವರು ಉತ್ತರ ಕೊಟ್ಟಿದ್ದಾರೆ. ಹೀಗಾಗಿ ನಾನು ಉತ್ತರ ಕೊಡುವ ಅವಶ್ಯಕತೆಯಿಲ್ಲ ಎಂದರು. ಪ್ರಕಾಶ ಹುಕ್ಕೇರಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ಮಾತನಾಡಿದ ಅವರು ಬಿಜೆಪಿ ಓರ್ವ ವ್ಯಕ್ತಿಯ ಪಕ್ಷ ಅಲ್ಲ. ಸಾಮೂಹಿಕ ಸಂಘಟನೆ ಹೊಂದಿರುವ ಪಕ್ಷವಾಗಿದೆ. ರಾಜ್ಯಾಧ್ಯಕ್ಷ ಕಟೀಲ್, ಪ್ರಧಾನ ಕಾರ್ಯದರ್ಶಿ ಸಂಘಟನಾ ಮಹಾಮಂತ್ರಿ ಅರುಣ್ ಸೇರಿ ಹಿರಿಯ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

Related posts

ಮೋದಿ ಇಡೀ ಜಗತ್ತು ಮೆಚ್ಚುವ ಹಾಗೆ ಕೆಲಸ ಮಾಡಿದ್ದಾರೆ : ಸುರೇಶ ಅಂಗಡಿ

Siddu Naduvinmani

119 ಜನ ಗುಣಮುಖ, 121 ಹೊಸ ಪ್ರಕರಣ, 3 ಮೃತ ಪ್ರಕರಣ

Siddu Naduvinmani

ಮಲಪ್ರಭಾ ನದಿ ತೀರದಲ್ಲಿ ಸ್ವಚ್ಛತಾ ಅಭಿಯಾನ

admins

Leave a Comment