Hasirukranti
leadingnews ರಾಜ್ಯ

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ: 5ರಂದು ಕರ್ನಾಟಕ ಬಂದ್ ಗೆ ಕರೆ

 

ಬೆಂಗಳೂರು, ನ.20: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ ವ್ಯಕ್ತಪಡಿಸಿರುವ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಒಕ್ಕೋರಲ ಕರೆ ನೀಡಿವೆ.

ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಕರ್ನಾಟಕ ಬಂದ್ ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.

ಸಭೆ ಬಳಿಕ ಮಾತನಾಡಿದ ವಾಟಾಳ್ ನಾಗರಾಜ್, ಡಿಸೆಂಬರ್ 5ರಂದು ಕರ್ನಾಟಕ ಬಂದ್ ಗೆ ಒಗ್ಗಟ್ಟಿನ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ನಾವು ಅವಕಾಶ ನೀಡುವುದಿಲ್ಲ. ಸರ್ಕಾರ ತಕ್ಷಣ ತನ್ನ ಆದೇಶ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

Related posts

ಬೆಳಗಾವಿ ಜಿಲ್ಲಾಸ್ಪತ್ರೆ ಒಳಗೆ ನುಗ್ಗಿ ಹಲ್ಲೆ, ಆಂಬುಲೆನ್ಸಿಗೆ ಬೆಂಕಿ ಪ್ರಕರಣ – ಮೂವರನ್ನು ಬಂಧಿಸಿದ ಪೊಲೀಸರು

Siddu Naduvinmani

ಕರ್ನಾಟಕದಲ್ಲಿಂದು ಒಂದೇ ದಿನ 149 ಕೊರೋನಾ ಪಾಸಿಟಿವ್ : ಮಂಡ್ಯ, ದಾವಣಗೆರೆಯಲ್ಲಿ ಅತಿ ಹೆಚ್ಚು ಸೋಂಕು ದೃಢ

Siddu Naduvinmani

ಪ್ರತಿ ಭಾನುವಾರ ಮತ್ತೆ ಲಾಕ್‍ಡೌನ್‍ಗೆ ಸರಕಾರ ನಿರ್ಧಾರ : ನಾಳೆಯಿಂದ ರಾತ್ರಿ ಸಂಚಾರ ನಿರ್ಬಂಧ

Hasiru Kranti

Leave a Comment