Hasirukranti
leadingnews ಬೆಳಗಾವಿ ರಾಜ್ಯ

ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲಸಿಕೆ ವಿತರಿಸುವ ವ್ಯವಸ್ಥೆ ಆಗಿದೆ: ಸಚಿವ ಸುಧಾಕರ್

 

ಬೆಳಗಾವಿ,ನ.21: ಕೇಂದ್ರ ಆರೋಗ್ಯ ಸಚಿವರ ಜೊತೆ ವಿಡಿಯೋ ಸಂವಾದವೂ ಆಗಿದೆ, ಕೊರೊನಾ ಲಸಿಕೆ ಬಂದ್ಮೇಲೆ ವಿತರಣೆ ನಿಧಾನ ಆಗಬಾರದಂತೆ ಸಕಲ ವ್ಯವಸ್ಥೆ ಮಾಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲಸಿಕೆ ವಿತರಿಸುವ ವ್ಯವಸ್ಥೆ ಆಗಿದೆ ಎಂದು ಬೆಳಗಾವಿಯಲ್ಲಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಇಲ್ಲಿನ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಪ್ರಧಾನಿಯವರು ಕ್ಲಿನಿಕಲ್ ಟ್ರಯಲ್ ನಡೆಸಿರುವ ಕಂಪನಿಗಳ ಜತೆ ಸಮಾಲೋಚನೆ ನಡೆಸಿದ್ದಾರೆ. ಅಡ್ವಾನ್ಸ್ ಆಗಿ ಮೂರನೇ ಹಂತ ತಲುಪಿದ ಕಂಪನಿ ಜೊತೆ ಕೇಂದ್ರ ಸಮಾಲೋಚನೆ ನಡೆದಿದ್ದು, ಅದೇ ರೀತಿ ಕಂಪನಿಗಳ ಜೊತೆ ಕೇಂದ್ರ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ಯಾವ ಕಂಪನಿಗೆ WHO ಅಧಿಕೃತ ಅಂತಾ ಘೋಷಣೆ ಮಾಡ್ತಾರೆ ಆ ಲಸಿಕೆ ಸಿಗುವ ಕೆಲಸ ಆಗುತ್ತೆ ಎಂದರು.

ಭಾರತ ದೇಶದಲ್ಲಿ ದೊಡ್ಡ ಮಟ್ಟಿಗೆ ಲಸಿಕೆ ಸಿಗುವ ಕೆಲಸ ಆಗುತ್ತೆ, ಆರೋಗ್ಯ ಇಲಾಖೆಯಲ್ಲಿ ಜನಪರ ಬದಲಾವಣೆಗಳು ನಡೀತಾ ಇವೆ, ಅಂತಾರಾಷ್ಟ್ರೀಯ ಗುಣಮಟ್ಟದ 108 ಆ್ಯಂಬುಲೆನ್ಸ್ ಸರ್ವೀಸ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ,ಕಾಲೇಜಿನ ವಿದ್ಯಾರ್ಥಿಗಳು ಹಾಗೂ ನಾವು ಯಾರೂ ಸಹ ಹೊರೆತಾಗಿಲ್ಲ, ಎಷ್ಟು ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಬಂದಿದೆ ನಿಖರ ಮಾಹಿತಿ ಇಲ್ಲ, ಉನ್ನತ ಶಿಕ್ಷಣ ಸಚಿವರ ಜೊತೆ ಮಾತನಾಡಿ ಮಾಹಿತಿ ಪಡೆಯುತ್ತೇನೆ, ಲಸಿಕೆ ಬಂದ್ರೆ ಅದರ ಸಂಗ್ರಹಕ್ಕೆ ಎಲ್ಲ ವ್ಯವಸ್ಥೆ ಆಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಮಾಜಿ ಶಾಸಕ ಸಂಜಯ ಪಾಟೀಲ, ಶಾಸಕ ಅನೀಲ ಬೆನಕೆ ಉಸ್ಥಿತರಿದ್ದರು.

Related posts

ರಾಜ್ಯದಲ್ಲಿ ಡ್ರಗ್ ಮಾರಾಟಕ್ಕೆ ಕಡಿವಾಣ ಹಾಕಲು ಕ್ರಮ: ಗೃಹ ಸಚಿವ ಬೊಮ್ಮಾಯಿ

Siddu Naduvinmani

ಅನ್ಯರಾಜ್ಯಗಳಿಗೆ ಶ್ರಮೀಕ್ ರೈಲು ಓಡಾಟ ಇದೇ 24ಕ್ಕೆ ಕೊನೆ

Hasiru Kranti

ರಾಯಣ್ಣನ ಪ್ರತಿಮೆ ವಿವಾದ : ಹಲವರ ವಿರುದ್ಧ ಪ್ರಕರಣ ದಾಖಲು

Siddu Naduvinmani

Leave a Comment