Hasirukranti
ಬಾಗಲಕೋಟೆ

ಬಾಗಲಕೋಟೆ: 6 ಜನ ಗುಣಮುಖ, 10 ಹೊಸ ಪ್ರಕರಣಗಳು ದೃಡ

ಬಾಗಲಕೋಟೆ: ನವೆಂಬರ 21 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ 19 ಜನ ಕೋವಿಡ್‍ನಿಂದ 6 ಜನ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 10 ಕೊರೊನಾ ಪ್ರಕರಣಗಳು ಶನಿವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13441 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 13177 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 3, ಬಾದಾಮಿ 1, ಹುನಗುಂದ 2, ಮುಧೋಳ 2, ಜಮಖಂಡಿ 2 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 615 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ.

ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 180808 ಸ್ಯಾಂಪಲ್‍ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 166241 ನೆಗಟಿವ್ ಪ್ರಕರಣ, ಹಾಗೂ 132 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 132 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 413 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 121 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related posts

ಪ್ರವಾಹ ಬಾಧಿತಗೊಳಗಾಗುವ ಪ್ರದೇಶಗಳಿಗೆ ಡಿಸಿಎಂ ಕಾರಜೋಳ ಭೇಟಿ : ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸಾರ್ವಜನಿಕರಲ್ಲಿ ಮನವಿ

Siddu Naduvinmani

87 ಜನ ಗುಣಮುಖ, 166 ಹೊಸ ಪ್ರಕರಣಗಳು ದೃಡ

Siddu Naduvinmani

ಪ್ರವಾಹ ಕಾರ್ಯದಲ್ಲಿ ಲೋಪ ಕಂಡುಬಂದಲ್ಲಿ ನಿರ್ಧಾಕ್ಷಿಣ್ಯ ಕ್ರಮ : ಡಿಸಿಎಂ ಕಾರಜೋಳ

Siddu Naduvinmani

Leave a Comment