ಪುಲ್ವಾಮಾದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾ ಪಡೆ

Ravi Talawar
WhatsApp Group Join Now
Telegram Group Join Now

ಜಮ್ಮುಕಾಶ್ಮೀರ,ಏಪ್ರಿಲ್ 11:  ಗುರುವಾರ ಬೆಳ್ಳಂಬೆಳಗ್ಗೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಫ್ರಾಸಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್​ನಲ್ಲಿ ಓರ್ವ ಅಪರಿಚಿತ ಉಗ್ರನನ್ನು ಹೊಡೆದುರುಳಿಸಲಾಗಿದೆ. ಉನ್ನತ ಪೊಲೀಸ್ ಅಧಿಕಾರಿಗಳ ಹೇಳಿಕೆಯ ಪ್ರಕಾರ, ಸುತ್ತಮುತ್ತಲ ಪ್ರದೇಶದಲ್ಲಿ ಉಗ್ರಗಾಮಿಗಳು ಇರುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಎನ್‌ಕೌಂಟರ್ ನಡೆದಿದೆ.

ಗುಪ್ತಚರ ಮಾಹಿತಿ ಮೇರೆಗೆ ನಂತರ, ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ಜಂಟಿ ತಂಡವು ಪ್ರದೇಶದಲ್ಲಿ ತ್ವರಿತ ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಅಡಗಿ ಕುಳಿತಿದ್ದ ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರಿಯುತ್ತಿದ್ದಂತೆ, ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿ ನಡೆಸಿದ್ದರು. ಇದರಿಂದ ತೀವ್ರ ಗುಂಡಿನ ಚಕಮಕಿ ನಡೆದಿತ್ತು.

ಈ ಗುಂಡಿನ ಕಾಳಗದಲ್ಲಿ ಅಪರಿಚಿತ ಉಗ್ರಗಾಮಿಯನ್ನು ಕೊಂದು ಹಾಕಲಾಗಿದೆ. ಇತರರಿಗಾಗಿ ಶೋಧ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ. ಹತನಾದ ಉಗ್ರನ ಗುರುತು ಇನ್ನೂ ಪತ್ತೆಯಾಗಿಲ್ಲ. ಅಲ್ಲದೇ, ಎನ್‌ಕೌಂಟರ್‌ಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.

ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಎರಡರಿಂದ ಮೂರು ಉಗ್ರರು ಅಡಗಿ ಕುಳಿತಿದ್ದಾರೆ. ಸೇನೆಯ 55 ರಾಷ್ಟ್ರೀಯ ರೈಫಲ್ಸ್, ಸಿಆರ್‌ಪಿಎಫ್ ಮತ್ತು ಪೊಲೀಸರು ಜಂಟಿಯಾಗಿ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಮತ್ತು ಸೇನೆಯ ನಡುವಿನ ಘರ್ಷಣೆಯ ಸುಮಾರು ಒಂದು ವರ್ಷದ ಬಳಿಕ ಬುಧವಾರ ಶೋಪಿಯಾನ್ ಜಿಲ್ಲೆಯಲ್ಲಿ ಸ್ಥಳೀಯರಲ್ಲದ ವ್ಯಕ್ತಿಯೋರ್ವನನ್ನು ಅಪರಿಚಿತರು ಹತ್ಯೆ ಮಾಡಿದ್ದರು. ಕಣಿವೆಯಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳು ಗರಿಗೆದರಿದ್ದು, ಉಗ್ರ ಚಟುವಟಿಕೆಗಳನ್ನು ತಡೆಗಟ್ಟಲು ಮತ್ತು ಜನರಿಗೆ ಭದ್ರತೆ ಒದಗಿಸಲು, ಪೊಲೀಸರು ಮತ್ತು ಸೇನಾಪಡೆಗಳು ವಿವಿಧೆಡೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುತ್ತಿವೆ.

WhatsApp Group Join Now
Telegram Group Join Now
Share This Article