ಹನೂರಿನ ಕ್ರಿಸ್ತರಾಜ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ

Hasiru Kranti
WhatsApp Group Join Now
Telegram Group Join Now

ಹನೂರಿನ ಕ್ರಿಸ್ತರಾಜ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸಾಧಕರಿಗೆ ಸನ್ಮಾನ.

ವರದಿ : ಬಂಗಾರಪ್ಪ ಸಿ .

ಹನೂರು : ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಳೆದ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕ್ರಿಸ್ತರಾಜ ಕಾಲೇಜಿಗೆ ಶೇಕಡಾ 97.18 ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ ಶಶಾಂಕ್ 600 ಕ್ಕೆ 584 ಅಂಕಗಳನ್ನು ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

ವಿಜ್ಞಾನ ವಿಭಾಗದಲ್ಲಿ ಅನು ಸಿ 600 ಕ್ಕೆ 564 ಅಂಕಗಳನ್ನು ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಇನ್ನುಳಿದಂತೆ ವೀರೇಶ್ 574 ಅಂಕ, ದಿವ್ಯ 570 ಅಂಕ, ಲಿಖಿತ ಸಿ.ಎಸ್ 558 ಅಂಕ, ಮಹೇಶ್ವರಿ ಮತ್ತು ಜೀವಿತ 552 ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಒಟ್ಟಾರೆ 142 ವಿದ್ಯಾರ್ಥಿಗಳಲ್ಲಿ 52 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 79 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ವಿದ್ಯಾಸಂಸ್ಥೆಯ ಆವರಣದಲ್ಲಿ ಕೇಕ್ ಕತ್ತರಿಸುವ ಮೂಲಕ ಸಂಸ್ಥೆಯ ವ್ಯವಸ್ಥಾಪಕ ಫಾದರ್ ರೋಷನ್ ರವರು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಎಲ್ಲರಿಗೂ ಕೇಕ್ ಮತ್ತು ಬಾದಾಮಿ ಹಾಲು ವಿತರಿಸುವ ಮೂಲಕ ಸಂಭ್ರಮಿಸಿದರು.

ವಿದ್ಯಾರ್ಥಿಗಳು ಸಂಸ್ಥೆಯ ಆಸ್ತಿಗಳು, ವಿದ್ಯಾರ್ಥಿಗಳ ಈ ಸಾಧನೆಯ ಹಿಂದೆ ಉಪನ್ಯಾಸಕರ ಪರಿಶ್ರಮವಿದೆ. ಈ ವಿದ್ಯಾಸಂಸ್ಥೆಯಲ್ಲಿ ಕಲಿತ ಜ್ಞಾನ ಮೌಲ್ಯವನ್ನು ಜೀವನದ ಕೊನೆಯವರೆಗೂ ಅಳವಡಿಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ವಿನೋದ್, ಪ್ರಕಾಶ್, ಸೋಮಣ್ಣ, ಪವಿತ್ರ ಜೈನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article