ಬಳ್ಳಾರಿ,ಅ,೨೩: ಕರ್ನಾಟಕ ರಾಜ್ಯ ಸರ್ಕಾರದ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಾಜಿ ಸಚಿವರು ಹಾಗೂ ಬಿಜೆಪಿಯ ಹಿರಿಯ ಧುರೀಣರಾದ ಬಿ.ಶ್ರೀರಾಮುಲುರವರು ನಗರದಲ್ಲಿರುವ ಅವರ ನಿವಾಸದಲ್ಲಿ ಆಯುಧ ಪೂಜೆಯನ್ನು ನೆರವೇರಿಸಿದರು.
ಹಿಂದೂ ಧರ್ಮದವರು ಪರಮ ಪವಿತ್ರವಾಗಿ ಆಚರಿಸುವ ನವರಾತ್ರಿ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಸೋಮವಾರದಂದು
ಮಾಜಿ ಸಚಿವ ಬಿ.ಶ್ರೀರಾಮುಲುರವರು ತಮ್ಮ ನಿವಾಸದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಯುಧ ಪೂಜೆಯನ್ನು ನೇರವೇರಿಸಿದರು.
ತಮ್ಮ ವಾಹನಗಳಿಗೆ ಮತ್ತಿತರೆ ಆಯುಧಗಳಿಗೆ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪಾಲಣ್ಣ ಮತ್ತು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಗುಣ ಹಾಗೂ ಮಾಜಿ ಸಚಿವರ ಬೆಂಬಲಿಗರು, ಅಭಿಮಾನಿಗಳು, ಪಕ್ಷದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.