ಬೆಂಗಳೂರು ಜೂ., 21- ನಂದಿನಿ ಹಾಲಿನ ದರವನ್ನು ಐದು ರೂಪಾಯಿ ಹೆಚ್ಚಳ ಮಾಡುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಮತ್ತು ಕರ್ನಾಟಕ ಹಾಲು ಮಾರಾಟ ಮಹಾಮಂಡಳದ ನೂತನ ಅಧ್ಯಕ್ಷರಾದ ಭೀಮಾ ನಾಯಕ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೆಎಂಎಫ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಭೀಮನಾಯಕ ಅವರು ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಐದೂರು ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ ಆದ್ದರಿಂದ ಇದನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ ಅವರು ನಂದಿನಿ ಹಾಲು, ರಾಷ್ಟ್ರಮಟ್ಟದ ಬ್ರಾಂಡ್ ಆಗಿದೆ ಖಾಸಗಿ ಸಂಸ್ಥೆಗಳೊಂದಿಗೆ ಸ್ಪರ್ಧೆ ಯೋಡುವ ಕೆಲಸವನ್ನು ಕೆಎಂಎಫ್ ಮಾಡಲಿದೆ. ಅಷ್ಟೇ ಅಲ್ಲದೆ ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ರೈತರಿಗೆ 500 ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಈ ಪ್ರೋತ್ಸಾಹ ಧನವನ್ನು ಇನ್ನೂ ಎರಡು ರೂಪಾಯಿ ಹೆಚ್ಚಳದ ಬಗ್ಗೆ ಚಿಂತನೆ ನಡೆದಿದೆ ಆದ್ದರಿಂದ ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರವನ್ನು ಪ್ರತಿ ಲೀಟರ್ಗೆ ಐದು ರೂಪಾಯಿ ಹೆಚ್ಚಳ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಹಾಲಿನ ದರ ಹೆಚ್ಚಳವನ್ನು