ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಕಾನೂನು ಕಂಟಕ

Ravi Talawar
WhatsApp Group Join Now
Telegram Group Join Now

ಬೆಂಗಳೂರು, ಏಪ್ರಿಲ್ 05: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್​ ಅವರಿಗೂ ಸಹ ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್​ ಜಾರಿ ಮಾಡಿ ಆದೇಶ ಹೊರಡಿಸಿದೆ.

ಮಾರ್ಚ್​ 30ರಂದು ಕಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೇ ಪ್ರಚಾರ ಸಭೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ್ದರು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

WhatsApp Group Join Now
Telegram Group Join Now
Share This Article