This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಖಾನಾಪುರದ 100 ಗ್ರಾಮಗಳ ಪ್ರತಿ ಮನೆಗೆ ಕುಡಿಯುವ ನೀರು ಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ಬೆಳಗಾವಿ (ಖಾನಪುರ), ನವೆಂಬರ್ 9 : ಜಲಜೀವನ್ ಮಿಷನ್ ನ ಹರ್ ಘರ್ ಜಲ್ ಯೋಜನೆಯಡಿ ಖಾನಾಪುರದ 100 ಗ್ರಾಮಗಳ ಪ್ರತಿಯೊಂದು ಮನೆಗೆ ಕುಡಿಯುವ ನೀರಿನ ಪೂರೈಕೆಗಾಗಿ 434 ಕೋಟಿ ರೂ. ಮೊತ್ತದ ಯೋಜನೆ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ಹೈನುಗಾರಿಕೆ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ:ಖಾನಾಪುರ ತಾಲ್ಲೂಕಿನಲ್ಲಿ ಹೈನುಗಾರಿಕೆ ಮಾಡುವ ಗೌಳಿ ಜನಾಂಗ ಸಾಕಷ್ಟಿದ್ದಾರೆ. ಮರಾಠ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ನೀಡಿ, ಗೌಳಿ ಜನಾಂಗಕ್ಕೆ ಶೆಡ್ ಗಳು , ದನಕರುಗಳು ಸೇರಿದಂತೆ , ಹೈನುಗಾರಿಕೆಗೆ ಬೇಕಾದ ವ್ಯವಸ್ಥೆಗಳನ್ನು ಪೂರೈಸಲು ತಿಳಿಸಲಾಗಿದ್ದು, ಈ ವಿಶೇಷ ಕಾರ್ಯಕ್ರಮಕ್ಕೆ ಆದೇಶ ಮಾಡುವ ಮೂಲಕ ಗೌಳಿ ಜನಾಂಗದವರಿಗೆ ಅನುಕೂಲ ಕಲ್ಪಿಸಲಾಗುತ್ತಿದೆ ಎಂದರು.

ಖಾನಾಪುರದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯ ನಿರ್ಮಾಣ:ಖಾನಾಪುರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಹಿಂದುಳಿದ ವರ್ಗದವರಿಗೆ ಹಾಗೂ ಎಸ್ ಸಿ ಎಸ್ ಟಿ ವರ್ಗಕ್ಕೆ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗುವುದು. ಈ ಭಾಗದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಅನುದಾನವನ್ನು ಶೀಘ್ರದಲ್ಲಿ ಒದಗಿಸಲಾಗುವುದು. ಮಹದಾಯಿ ನೀರಾವರಿ ಯೋಜನೆಯಡಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಹಾಗೂ ನೀರಾವರಿ ವ್ಯವಸ್ಥೆಗೆ ಖಾನಾಪುರವನ್ನು ಜೋಡಿಸಲಾಗುವುದು. ಜಾಂಬೂಟಿ ಜೇನಿನ ಅಭಿವೃದ್ಧಿಗೆ 5 ಕೋಟಿ ರೂ.ನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು, ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಖಾನಾಪುರದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಮಾಡುವ ಮೂಲಕ ಯುವಕರಿಗೆ ಉದ್ಯೋಗ ಒದಗಿಸಲಾಗುವುದು ಎಂದರು.


Leave a Reply