This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

State News

ಕೂಡಲಸಂಗಮ ಕ್ಷೇತ್ರದಲ್ಲಿ ಜನವರಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ


ಬೆಂಗಳೂರು, ಅಕ್ಟೋಬರ್ 06: ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲಸಂಗಮ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಜನವರಿ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ 16 ನೇ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಬಸವ ಅಂತರರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಸಂಗ್ರಹಾಲಯ, ಕೂಡಲಸಂಗಮ ಸಂಕೀರ್ಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಕೂಡಲ ಸಂಗಮದಲ್ಲಿ ಬಸವಣ್ಣನವರ ಜೀವನ ಚರಿತ್ರೆ ಹಾಗೂ ವಿಚಾರಧಾರೆಗಳ ಪೂರ್ಣ ಚಿತ್ರಣವನ್ನು ಬಿಂಬಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ಮುರುಗೇಶ್ ನಿರಾಣಿ, ಹುನುಗುಂದ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಹಾಗೂ ಕೂಡಲು ಸಂಗಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.


Leave a Reply