This is the title of the web page

ಅಮೃತ ಮಹೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಕಾಂಗ್ರೆಸ್ ಮುಖಂಡರ ಕರೆ

ಆ.3ರಂದು ಅರಭಾವಿ ಕ್ಷೇತ್ರದಿಂದ ಸುಮಾರು 10 ಸಾವಿರ ಜನ ಪಾಲ್ಗೊಳ್ಳುವ ನಿರೀಕ್ಷೆ....

0 50

ಮೂಡಲಗಿ ಜು.27 : ಆಗಸ್ಟ್ 3ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಂಗವಾಗಿ ದಾವಣಗೇರೆ ಯಲ್ಲಿ ಆಯೋಜಿಸಲಾಗಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಅರಭಾವಿ ಕ್ಷೇತ್ರದ ಸಮಸ್ತ ನಾಗರಿಕರು ಪಕ್ಷಾತೀತವಾಗಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಮನವಿ ಮಾಡಿದರು.

ಬುಧವಾರದಂದು ಪಟ್ಟಣದಲ್ಲಿ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ತೆರಳಲು 25 ವಾಹನಗಳ ವ್ಯವಸ್ಥೆ ಮಾಡಲಾಗಿದ್ದು, ಇನ್ನು ಹೆಚ್ಚಿನ ವಾಹನಗಳ ಅವಶ್ಯಕತೆ ಇದ್ದರೂ ವ್ಯವಸ್ಥೆ ಮಾಡಲು ಸಿದ್ಧರಿದ್ದೇವೆ ಎಂದರು.ಇನ್ನೊಂದು ವಿಶೇಷತೆಯಂದರೆ ಹಂದಿಗುಂದ ಶ್ರೀಗಳಾದ ಶ್ರೀಮಂತ ಶಿವಯೋಗಿ ಮಹಾರಾಜರು ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರಿಗೆ ಒಂದೂವರೆ ಕೆಜಿ ತೂಕದ ಸಿದ್ದರಾಮಯ್ಯ ಪ್ರತಿರೂಪದ ಬೆಳ್ಳಿ ಪುತ್ತಳಿಯನ್ನು ಉಡುಗೊರೆಯಾಗಿ ನೀಡಲಿದ್ದಾರೆ ಎಂದರು.

ಕಾಂಗ್ರೆಸ್ ಹಿರಿಯ ಮುಖಂಡರಾದ ಬಿ.ಬಿ.ಹಂದಿಗುಂದ ರವರು ಮಾತನಾಡುತ್ತಾ ಮೂಡಲಗಿ ತಾಲೂಕಿನಿಂದ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಹಾಗೂ ಜಾತ್ಯಾತೀತವಾಗಿ ಸುಮಾರು 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು,ಅದಕ್ಕೆ ಬೇಕಾದ ಸೂಕ್ತ ವ್ಯವಸ್ಥೆಯನ್ನು ಈಗಾಗಲೇ ಮಾಡಿಕೊಂಡಿದ್ದೇವೆ ಎಂದರು. ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಂಗವಾಗಿ ಜರುಗುತ್ತಲಿರುವ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ತಮ್ಮ ಸುಧೀರ್ಘ 40 ವರ್ಷಗಳ ರಾಜಕೀಯ ಜೀವನದ ಅನುಭವಗಳನ್ನು ಪ್ರಸ್ತುತಪಡಿಸಲಿದ್ದು ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಸುಮಾರು 10 ಲಕ್ಷ ಜನರು ಭಾಗವಹಿಸಿ ಭವ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹಂದಿಗುಂದ ಶ್ರೀಗಳಾದ ಶ್ರೀಮಂತ ಶಿವಯೋಗಿ ಮಹಾರಾಜರು, ಅರಭಾವಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಗುರುನಾಥ ಗಂಗನ್ನವರ, ಶಿವಾನಂದ ಮಡಿವಾಳರ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು

You might also like
Leave a comment