ಬಡವರ-ರೈತರ ಪಕ್ಷ ಅದುವೇ ಕಾಂಗ್ರೆಸ್: ಸಚಿವ ಸತೀಶ್‌ ಜಾರಕಿಹೊಳಿ

Ravi Talawar
WhatsApp Group Join Now
Telegram Group Join Now

ಬೆಳಗಾವಿ,ಏಪ್ರಿಲ್​ 18:  ಬಡವರು, ರೈತರು ಹಾಗೂ ಜನಸಾಮಾನ್ಯರ ಪರ ಕೆಲಸ ಮಾಡಿ ಅವರ ಕುಂದು ಕೊರತೆಗಳಿಗೆ ಸ್ಪಂದಿಸುವಂತಹ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಿಯಂಕಾ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಮನವಿ ಮಾಡಿದರು.

ಕುಡಚಿ ವಿಧಾನಸಭಾ ಮತಕ್ಷೇತ್ರದ ಗುಂಡವಾಡ, ಶಿರಗೂರ,  ಪರಮಾನಂದವಾಡಿ, ಖೇಮಲಾಪೂರ ಗ್ರಾಮಗಳಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಲೋಕಸಭೆಯ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ 2013ರಲ್ಲಿ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಿತು 158 ಭರವಸೆಗಳನ್ನು ಈಡೇರಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ಶೂ ಭಾಗ್ಯ, ರೈತರ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಹಾಗೂ ವಿದ್ಯಾಸಿರಿ ಯೋಜನೆಗಳನ್ನು ಈಡೇರಿಸಿದೆ ಎಂದರು.

ರಾಯಬಾಗ ಹಾಗೂ ಚಿಕ್ಕೋಡಿ ಭಾಗದಲ್ಲಿಕೂಡಾ ಸಾಕಷ್ಟು ಅಭಿವೃದ್ಧಿಗೆ ಕೆಲಸ ಮಾಡಲಾಗಿದೆ.  ಚಿಂಚಲಿ ಗ್ರಾಮದಲ್ಲಿ ನಮ್ಮ ಕಾರ್ಯಕರ್ತರು ಹಾಗೂ ಹಿಂದೆ ಪಕ್ಷೇತರವಾಗಿದ್ದ ಕಾರ್ಯಕರ್ತರು ಇಂದು ಒಂದಾಗಿದ್ದರಿಂದ ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ.  ಈ ಬಾರಿ ಇದೊಂದು ಒಳ್ಳೆಯ ಅವಕಾಶವಿದ್ದು,  ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚು ಬೆಂಬಲ ನೀಡಲು ಮುಂದಾಗಬೇಕು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂಬತ್ತು ತಿಂಗಳ ಒಳಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದೆ ಎಂದರು.

ಪ್ರತಿಯೊಂದು ಕುಟುಂಬಗಳಿಗೆ ನಾಲ್ಕರಿಂದ ಐದು ಸಾವಿರ ಹಣ ಉಳಿತಾಯವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಂದು ಮನೆಯ ಗೃಹಿಣಿಯರು 2000 ಪಡೆದುಕೊಳ್ಳುತ್ತಿದ್ದಾರೆ. ವಿಧ್ಯುತ್ ಅನ್ನು ಉಚಿತವಾಗಿ ಪಡೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯದಲ್ಲಿ 5 ಕೆಜಿ ಅಕ್ಕಿ 5 ಕೆ.ಜಿ ಗೆ ಹಣವನ್ನು ಪಡೆಯುತ್ತಿದ್ದಾರೆ. ಆದ್ದರಿಂದ ಈ ಬಾರಿ ಪ್ರತಿಯೊಬ್ಬರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕು ಎಂದು ಮನವಿ ಮಾಡಿದರು.

WhatsApp Group Join Now
Telegram Group Join Now
Share This Article