ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದ್ವೇಷದ ರಾಜಕಾರಣ ಪ್ರದರ್ಶಿಸುತ್ತಾ, ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಸಾಂವಿಧಾನಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ನಾಶಗೊಳಿಸುತ್ತಿರುವುದನ್ನು ವಿರೋಧಿಸಿ ಕೆಪಿಸಿಸಿ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮತ್ತು ಸಚಿವ ಡಿ.ಕೆ.ಶಿವಕುಮಾರ, ಸಚಿವ ಕೆ. ಎಚ್. ಮುನಿಯಪ್ಪ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ ಮತ್ತು ಅನೇಕ ನಾಯಕರು ಭಾಗವಹಿಸಿದ್ದರು.
ಬಾಯಿಗೆ ಕಪ್ಪು ಬಣ್ಣದ ಬಟ್ಟೆ ಕಟ್ಟಿಕೊಂಡು ಕಾಂಗ್ರೆಸ್ ನಾಯಕರಿಂದ ಮೌನ ಪ್ರತಿಭಟನೆ.