This is the title of the web page

ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ಸರ್ಜನ್ ನಿಯೋಜನೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

0 26

ಬೆಳಗಾವಿ, ಜು.19:- ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀಡಿದ ಸೂಚನೆಯ ಮೇರೆಗೆ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಿ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ಜನ್ ಇಲ್ಲದಿರುವ ಸಂಗತಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ತಮ್ಮ ಗಮನಕ್ಕೆ‌ ಬಂದಾಗ ಕೂಡಲೇ ವೈದ್ಯರನ್ನು ನಿಯೋಜಿಸುವಂತೆ ಸಚಿವರು ತಿಳಿಸಿದ್ದರು. ಆ ಪ್ರಕಾರ ‌ಕೆಲವೇ ಗಂಟೆಗಳಲ್ಲಿ ಬೈಲಹೊಂಗಲ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಲಾಗಿರುತ್ತದೆ.

ಜನರಲ್ ಸರ್ಜನ್ ಆಗಿರುವ ಡಾ.ರಾಜಶೇಖರ್ ಯರಜರ್ವಿ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ನಿಯೋಜಿಸಲಾಗಿರುತ್ತದೆ. ನಿಯೋಜಿತ ಸ್ಥಳದಲ್ಲಿ ಕೂಡಲೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

You might also like
Leave a comment