This is the title of the web page
This is the title of the web page

Live Stream

November 2022
T F S S M T W
 12
3456789
10111213141516
17181920212223
24252627282930

| Latest Version 8.0.1 |

Local News

ಸರ್ಕಾರಿ ನೌಕರರ ನ್ಯಾಯಯುತ  ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ


ಬಳ್ಳಾರಿ, ಸೆ.೨೯: ರಾಜ್ಯ ಸರ್ಕಾರಿ ನೌಕರರು ಬೆಲೆ ಏರಿಕೆಯಿಂದ ಸಂಕಷ್ಟಕ್ಕೊಳಗಾಗಿದ್ದು ತಮ್ಮ ದೈನದಿಂದ ಬದುಕು ನಿರ್ವಹಿಸುವುದು ಕಷ್ಟವಾಗುತ್ತಿದ್ದು ತಮ್ಮ ಪ್ರಮುಖ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಸದಸ್ಯರು ಧರಣಿ ನಡೆಸಿದರು.
ರಾಜ್ಯ ಸರ್ಕಾರಿ ನೌಕರರ ವಿವಿಧ ಸಂಘಟನೆಗಳು ಹಾಗೂ ಇಲಾಖಾ ಮತ್ತು ವೃಂದ ಸಂಘಗಳ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಕರೆಯ ಮೇರೆಗೆ ರಾಜ್ಯವ್ಯಾಪಿಯಾಗಿ ಒಂದು ದಿನದ “ರಾಜ್ಯಮಟ್ಟದ ಧರಣಿಗೆ ಕರೆ ನೀಡಿದ ಹಿನ್ನೆಲೆಯಲ್ಲಿ ನಗರದಲ್ಲೂ ಧರಣಿಯನ್ನು ಆಯೋಜಿಸಲಾಗಿತ್ತು. ಸಂಘದ ರಾಜ್ಯದ  ಜಂಟಿ ಕಾರ್ಯದರ್ಶಿ ರಿಜ್ವನ್ ಖಾನ್ ಬೇಡಿಕೆಗಳ ಬಗ್ಗೆ ಮಾತನಾಡಿದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರಿ/ಹೈಕೋರ್ಟ್/ನೆರೆ ರಾಜ್ಯಗಳ  ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಸೌಲಭ್ಯಗಳ ಪರಿಷ್ಕರಣೆ ಮಾಡಲು ೭ನೇ ವೇತನ ಆಯೋಗ ರಚಿಸುವುದು, ಕೋವಿಡ್ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ನೌಕರರ ಮತ್ತು ಪಿಂಚಣಿದಾರರ ೧೮ ತಿಂಗಳ ಬಾಕಿ ತುಟ್ಟಿಭತ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡುವುದು, ೨೦೨೨ರ ಜುಲೈ ನಿಂದ ಜಾರಿಗೆ ಬರುವಂತೆ ಶೇ.೨೫ ರಷ್ಟು ಮಧ್ಯಂತರ ಪರಿಹಾರವನ್ನು ಕೂಡಲೇ ಘೋಷಿಸುವಂತೆ ಒತ್ತಾಯಿಸಿದರು.
ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ, ನಿಶ್ಚಿತ ಪಿಂಚಣಿ ಪದ್ದತಿ ಮರುಸ್ಥಾಪಿಸುವಂತೆ ಆಗ್ರಹಿಸಿದರು..ಆಡಳಿತ ಸುಧಾರಣಾ ಆಯೋಗ-೨ರ ನೌಕರ-ವಿರೋಧಿ ಶಿಫಾರಸ್ಸುಗಳನ್ನು ಕೈಬಿಡುವುದು ಹಾಗೂ ಖಾಲಿಯಿರುವ ೨.೮೦ಲಕ್ಷ ಹುದ್ದೆಗಳನ್ನು ಭರ್ತಿಮಾಡಲು ಒತ್ತಾಯಿಸಿದರು, ಕೇಂದ್ರ ಸರ್ಕಾರಿ ನೌಕರರಿಗಿರುವಂತೆ ರಾಜ್ಯದಲ್ಲಿಯೂ ವಿಕಲಚೇತನ ನೌಕರರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಮನವಿ ಮಾಡಿಕೊಂಡರು.

Leave a Reply