This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಡಿ.15ರಂದು ನೂತನ ಬಿಜೆಪಿ ಕಾರ್ಯಾಲಯ ಲೋಕಾರ್ಪಣೆ – ದೊಡ್ಡನಗೌಡ ಪಾಟೀಲ್ ಜೆ.ಪಿ.ನಡ್ಡಾ ಅವರಿಂದ ನೂತನ ಭಾಜಪ ಕಚೇರಿ ಉದ್ಘಾಟನೆ


ಕೊಪ್ಪಳ: ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಭಾರತೀಯ ಜನತಾ ಪಾರ್ಟಿಯ ಕಚೇರಿಯನ್ನು ಡಿ.15ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಹೇಳಿದರು.

ನಗರದ ಕೆಯುಡಬ್ಲ್ಯೂಜೆ ಪತ್ರಿಕಾ ಭವನದಲ್ಲಿ ‌ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಶ್ರಮದಿಂದ ನಗರದಲ್ಲಿ ಅತ್ಯಾಧುನಿಕ ಕಚೇರಿಯನ್ನು ನಿರ್ಮಾಣ ಮಾಡಿದ್ದು, ಮುಂಬರುವ ಚುನಾವಣೆಯಲ್ಲಿ ಕಾರ್ಯಕರ್ತರ ಮನೋಬಲವನ್ನು ಹೆಚ್ವಿಸಲು ಕಚೇರಿ ಸಹಕಾರಿಯಾಗಲಿದೆ. ಡಿ.15ರಂದು ಬೆ.11ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರವರು ಗೋಮಾತೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನಂತರ ಕಚೇರಿಯನ್ನು ಜಿಲ್ಲಾಧ್ಯಕ್ಷರಿಗೆ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ ಡಿ.14 ಮತ್ತು 15 ರಂದು ಕಚೇರಿಯಲ್ಲಿ ಹೋಮ, ಹವನ ನಡೆಸಲಾಗುತ್ತಿದೆ ಎಂದರು.
ನಂತರ ನಗರದ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಮಾವೇಶ ಆಯೋಜನೆ ಮಾಡಲಾಗಿದೆ. ಸಮಾವೇಶದಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೀದರ್, ರಾಯಚೂರು, ಹಾವೇರಿ, ಗದಗ, ಬಳ್ಳಾರಿ ಸೇರಿ ಹತ್ತು ಜಿಲ್ಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿಜೆಪಿ ಕಾರ್ಯಾಲಯವನ್ನು ವರ್ಚುವಲ್ ಮೂಲಕ ಲೋಕಾರ್ಪಣೆಗೊಳಿಸಲಿದ್ದು, ಸಮಾವೇಶಕ್ಕೆ ಜಿಲ್ಲೆಯ ನಾನಾ ಭಾಗಗಳಿಂದ ಐವತ್ತು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಲ್ಲೂ ಬಿಜೆಪಿ ಕಚೇರಿ ನಿರ್ಮಾಣ ಮಾಡಲಾಗುತ್ತದೆ ಎಂದರು.
ನೂತನ ಬಿಜೆಪಿ ಕಚೇರಿ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ,
ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಆಗಮಿಸಲಿದ್ದಾರೆ ಎಂದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ,
ಜಿಲ್ಲೆಯಲ್ಲಿ ಕಚೇರಿ ನಿರ್ಮಾಣ ಮಾಡಬೇಕೆಂಬ ಕನಸು ಬಹಳ ವರ್ಷಗಳಿಂದ ಇತ್ತು. ಅದು ಇಂದು ಈಡೇರಿದೆ. ನೂತನ ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಮತ್ತು ಪಕ್ಷ ಸಹ ದೇಣಿಗೆ ನೀಡಿದ್ದಾರೆ. ಕಾರ್ಯಕರ್ತರೆ ನಮ್ಮ ಪಕ್ಷದ ಜೀವಾಳ ಎಂದರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜಿಲ್ಲೆಗೆ ಭರಪೂರ ಕೊಡುಗೆಗಳನ್ನು ಘೋಷಣೆ ಮಾಡಿದೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ನೂತನ ವಿಶ್ವವಿದ್ಯಾಲಯ, ಸಿಂಗಟಾಲೂರು ಏತ ನೀರಾವರಿ, ಕೊಪ್ಪಳ ಏತ ನೀರಾವರಿ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿ, ವಿಮಾನ ನಿಲ್ದಾಣ, ಕೆರೆ ತುಂಬಿಸುವ ಯೋಜನೆ, ಕೇಬಲ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಯನ್ನು ಘೋಷಣೆ ಮಾಡಿದೆ. ನಮ್ಮದು ಅಭಿವೃದ್ಧಿ ಪರ ಸರಕಾರ. ಪ್ರಜಾಪ್ರಭುತ್ವದಲ್ಲಿ ಅಧಿಕಾರಕ್ಕೆ ಬಂದ ಜನರ ಸೇವೆ ಮಾಡುವುದೇ ನಮ್ಮ ಜವಾಬ್ದಾರಿಯಾಗಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇವೆ ಎಂದ ಅವರು, ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರದಲ್ಲೂ ಮತ್ತೇ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲವು ಸಾಧಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಧ್ಯಮ ಸಂಚಾಲಕ ಮಹೇಶ ಹಾದಿಮನಿ ಸೇರಿದಂತೆ ಇತರರಿದ್ದರು.


Leave a Reply