ಡಾ. ಸಜ್ಜನರ ಅಭಿಮತ ನರೇಗಾ ಕಾಮಗಾರಿ ಸ್ಥಳದಲ್ಲಿ ಮತದಾನ ಜಾಗೃತಿ  

Ravi Talawar
WhatsApp Group Join Now
Telegram Group Join Now

ಗದಗ  ಏಪ್ರಿಲ್ 17: ದೇಶದಲ್ಲಿ ನಡೆಯುವ ಚುನಾವಣೆಗಳು ಪ್ರಜಾಪ್ರಭುತ್ವದ ಗೌರವವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತವೆ. ಸಂವಿಧಾನ ನೀಡಿರುವ ಮತದಾನದ ಹಕ್ಕು ದೇಶದ ಸಂಸತ್ತನ್ನು ನಿರ್ಮಿಸುವ ಹಕ್ಕಾಗಿದೆ. ನಾವೆಲ್ಲ ಚುನಾವಣೆ ದಿನಗಳನ್ನು ಚುನಾವಣೆ ಪರ್ವ ಅಂದರೆ ಅದು ದೇಶದ ಗರ್ವ ಅಂತ ಉಲ್ಲೇಖಿಸಬೇಕಾಗುತ್ತದೆ ಎಂದು ನರಗುಂದ ವಿಧಾನಸಭಾ ಚುನಾವಣೆ ಸಹಾಯಕ ಚುನಾವಣಾ ಅಧಿಕಾರಿ  ಡಾ.ಹಂಪಣ್ಣ ಸಜ್ಜನರ ಅವರು ಅಭಿಪ್ರಾಯಪಟ್ಟರು.

ತಾಲೂಕಿನ ಅರಿಶಿಣಗೋಡಿ ಗ್ರಾಮದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಕೈಗೊಂಡ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮಲ್ಲಿ ಭಾಗವಹಿಸಿ ಮಾತನಾಡಿದರು.

ಸುಭದ್ರ ಸರ್ಕಾರ ರಚನೆಗೆ ಪ್ರತಿಯೊಬ್ಬರ ಮತದಾನವು ಪ್ರಮುಖವಾಗಿದೆ.  ಕಡ್ಡಾಯ ಮತದಾನ ರಕ್ತದಾನ, ಅನ್ನದಾನ ಸೇರಿದಂತೆ ಇನ್ನಿತರೆ ಯಾವುದೇ ದಾನಕ್ಕಿಂತ್ತಲೂ ಹೆಚ್ಚಿನ ದಾನವಾಗಿದೆ. ಕೂಲಿಕಾರರು ಎಲ್ಲರೂ ಮೇ 7 ರಂದು ಮತ ಚಲಾಯಿಸಬೇಕು. ಸ್ವಂತ ಊರಿನಿಂದ ಬೇರೆ ಊರಿಗೆ ತೆರಳಿರುವ ತಮ್ಮ ಕುಟುಂಬ ಸದಸ್ಯರನ್ನು ಮತದಾನದ ದಿನ ಕರೆಸಿಕೊಂಡು ಮತದಾನ ಮಾಡಿಸಿ ಎಂದರು.
ಚುನಾವಣೆ ಆಯೋಗ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯತಗಳು ಇಡೀ ದೇಶಾದ್ಯಂತ ಸ್ವೀಪ್ ಚಟುವಟಿಕೆ ಮೂಲಕ ಕಡ್ಡಾಯ ಮತದಾನ ಬಗ್ಗೆ ಅರಿವು ಮೂಡಿಸುವ ಕೆಲಸವಾಗುತ್ತಿದೆ. ಎಲ್ಲ ಮತದಾರರು ಕಡ್ಡಾಯವಾಗಿ ಮತ ಹಕ್ಕನ್ನು ಚಲಾಯಿಸಿದಾಗ ಮಾತ್ರ ಸ್ವೀಪ್ ಸಮಿತಿ ಕಾರ್ಯ ಯಶಸ್ವಿಯಾಗುತ್ತದೆ.
ಕಾಮಗಾರಿ ಸ್ಥಳದಲ್ಲಿದ್ದ 300 ಕ್ಕೂ ಅಧಿಕ ಕೂಲಿಕಾರರಿಗೆ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕರಾದ ಸಂತೋಷಕುಮಾರ್ ಪಾಟೀಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಕಾಮಗಾರಿ ಸ್ಥಳದಲ್ಲಿ ಕೂಲಿಕಾರರು ಮಾನವ ಸರಪಳಿ ರಚಿಸುವ ಮೂಲಕ ಕಡ್ಡಾಯ ಮತದಾನ ಬಗೆಗಿನ ಘೋಷಣೆಗಳನ್ನು ಕೂಗಿದರು.
ಸ್ವೀಪ್ ಚಟುವಟಿಕೆ ಕಾರ್ಯಕ್ರಮದಲ್ಲಿ ನರಗುಂದ ತಾ.ಪಂ.ಇ.ಒ ಸೋಮಶೇಖರ್ ಬಿರಾದರ್ ಹಿರೇಕೊಪ್ಪ ಪಿಡಿಒ ಕೆ.ಎನ್.ಹದಗಲ್, ಜಿಲ್ಲಾ ಐಇಸಿ ಸಂಯೋಜಕರಾದ ವೀರಭದ್ರಪ್ಪ ಸಜ್ಜನ, ತಾಲೂಕು ಐಇಸಿ ಸಂಯೋಜಕ ಸುರೇಶ ಬಾಳಿಕಾಯಿ, ತಾಂತ್ರಿಕ ಸಹಾಯಕ ಅಲ್ತಾಪ ಅಮೀನಬಾವಿ, ಬಿಎಪ್ ಟಿ ಬಸವರಾಜ ಚಿಮ್ಮನಕಟ್ಟಿ, ಹಿರೇಕೊಪ್ಪ ಗ್ರಾಮ ಪಂಚಾಯತ ಸಿಬ್ಬಂದಿ ವರ್ಗ ಹಾಜರಿದ್ದರು.
WhatsApp Group Join Now
Telegram Group Join Now
Share This Article