ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಲ್ಲದು: ಸಂಸದ ದಿಲೀಪ್ ಘೋಷ್ & ಕಾಂಗ್ರೆಸ್ ನಾಯಕಿ ಸುಪ್ರಿಯಾಗೆ ಇಸಿಐ ವಾರ್ನಿಂಗ್

Ravi Talawar
WhatsApp Group Join Now
Telegram Group Join Now

ನವದೆಹಲಿ,ಏ.1: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬ್ಯಾನರ್ಜಿ ಮತ್ತು ಹಿಮಾಚಲ ಪ್ರದೇಶದ ಮಂಡಿ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನೇತಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ (ಇಸಿಐ) ಸೋಮವಾರ ಸೆನ್ಷರಿಂಗ್ ಆದೇಶ ಹೊರಡಿಸಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ಈ ಇಬ್ಬರು ನಾಯಕರಿಗೆ ನೀಡಲಾದ ನೋಟಿಸ್‌ಗಳಿಗೆ ಅವರ ಉತ್ತರ ಸ್ವೀಕರಿಸಿದ ನಂತರ ಚುನಾವಣಾ ಆಯೋಗ ಅವರ ವಿರುದ್ಧ ಕ್ರಮ ತೆಗೆದುಕೊಂಡಿದೆ. ದಿಲೀಪ್ ಘೋಷ್ ಮತ್ತು ಸುಪ್ರಿಯಾ ಅವರು ವೈಯಕ್ತಿಕ ದಾಳಿ ಮಾಡುವ ಮೂಲಕ ಮಾದರಿ ನೀತಿ ಸಂಹಿತೆ(ಎಂಸಿಸಿ)ಯ ನಿಬಂಧನೆಗಳನ್ನು ಉಲ್ಲಂಘಿಸಿರುವುದು ಮನವರಿಕೆಯಾಗಿದೆ ಎಂದು ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ನಟಿ ಕಂಗನಾ ರನೌತ್ ವಿರುದ್ಧ ಕ್ರಮವಾಗಿ ಬಿಜೆಪಿಯ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್‌ನ ಸುಪ್ರಿಯಾ ಶ್ರಿನೇತಾ ಅವರ “ಆಕ್ಷೇಪಾರ್ಹ”, “ಅವಮಾನಕರ” ಮತ್ತು “ಅಗೌರವದ” ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮಾರ್ಚ್ 27 ರಂದು ಶೋಕಾಸ್ ನೋಟಿಸ್‌ ನೀಡಿತ್ತು.

ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಲಭ್ಯವಾದ ಆದೇಶದ ಪ್ರತಿಯಲ್ಲಿ, ಚುನಾವಣಾ ಆಯೋಗ, ದಿಲೀಪ್ ಘೋಷ್ ಮತ್ತು ಸುಪ್ರಿಯಾ ಶ್ರಿನೇತಾ ಅವರಿಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಮಯದಲ್ಲಿ “ಸಾರ್ವಜನಿಕವಾಗಿ ಹೇಳಿಕೆ ನೀಡುವಾಗ ಜಾಗರೂಕರಾಗಿರಿ” ಎಂದು ಎಚ್ಚರಿಸಿದೆ.

ದಿಲೀಪ್ ಘೋಷ್ ಮತ್ತು ಸುಪ್ರಿಯಾ ಅವರ ಚುನಾವಣೆಗೆ ಸಂಬಂಧಿಸಿದ ಭಾಷಣಗಳನ್ನು ಈ ಸಮಯದಿಂದ ಆಯೋಗವು ವಿಶೇಷವಾಗಿ ಮತ್ತು ಹೆಚ್ಚುವರಿಯಾಗಿ ಮೇಲ್ವಿಚಾರಣೆ ಮಾಡಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

WhatsApp Group Join Now
Telegram Group Join Now
Share This Article