ಧಾರವಾಡ : ನಾಳೆ ದಿನಾಂಕ 20ರಂದು ನಡೆಯಲಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯ ಆಯ್ಕೆಗೆ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಅಭ್ಯರ್ಥಿ ಅಧಿಕಾರದ ಚುಕ್ಕಾಣಿ ಹಿಡಿಯಲು ತಂತ್ರ ಪ್ರತಿತಂತ್ರ ಹಣೆಯುತ್ತಿವೆ.
ಕಾಂಗ್ರೆಸ್ ಮತ್ತು ಬಿಜೆಪಿಯಿಂದ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು ದಾಂಡೇಲಿಯಲ್ಲಿ ತಮ್ಮ ಅಭ್ಯರ್ಥಿಗಳೊಂದಿಗೆ ರಾಜಕೀಯ ಲೆಕ್ಕಾಚಾರದಲ್ಲಿ ಪಕ್ಷದ ಮುಖಂಡರುಗಳು ತೊಡಗಿದ್ದಾರೆ.
ಮೇಯರ್ ಮತ್ತು ಉಪಮೇಯದ ಆಯ್ಕೆಗೆ ಸಂಬಂಧಿಸಿದಂತೆ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು ಬಿಜೆಪಿ ನಾಯಕ ಅರವಿಂದ್ ಬೆಲ್ಲದವರು ದಾಂಡೇಲಿಯಲ್ಲಿ ತಮ್ಮ ಪಕ್ಷದ ಮುಖಂಡರೊಂದಿಗೆ ತಂತ್ರ ರೂಪಿಸುತ್ತಿದ್ದಾರೆ. ದಾಂಡೇಲಿಯಲ್ಲಿ ತಮ್ಮ ಪಕ್ಷದ ಪಾಲಿಕೆ ಸದಸ್ಯರೊಂದಿಗೆ ಚರ್ಚೆಯಲ್ಲಿ ತೊಡಗಿರುವ ಅರವಿಂದ್ ಬೆಲ್ಲದವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ನ ಆಸೆ ಆಮೀಷಗಳಿಗೆ ಒಳಗಾಗದಿರಲು ಸೂಚಿಸಿದ್ದಾರೆ
ಸದ್ಯ ಹುಬ್ಬಳ್ಳಿ ಮಹಾನಗರ ಪಾಲಿಕೆ ಚುಕ್ಕಾಣಿ ಬಿಜೆಪಿ ಕೈಯಲ್ಲಿದ್ದರು ಕೂಡ ಕಳೆದ ವಿಧಾನಸಭೆಯಲ್ಲಿ ಬದಲಾದ ರಾಜಕೀಯ ಸನ್ನಿವೇಶಗಳಿಂದಾಗಿ ಇಂದು ಪಾಲಿಕೆ ತನ್ನಲ್ಲೇ ಉಳಿಸಿಕೊಳ್ಳಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ.
ಪಾಲಿಕೆ ಚುಕ್ಕಾಣಿ ಹಿಡಿಯಲು ಬಿಜೆಪಿಗೆ ಅಗತ್ಯ ಸಂಖ್ಯಾಬಲ ಇದ್ದರೂ ಕೂಡ ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಬದಲಾವಣೆಗಳು ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ಈ ಪಾಲಿಕೆಯ ಮೇಯರ್ ಉಪಮೇಯ ಚುನಾವಣೆ ಎರಡು ಪಕ್ಷಗಳಿಗೆ ಪ್ರತಿಷ್ಠೆಯ ಚುನಾವಣೆಯಾಗಿದೆ.
ತನ್ನ ಎಲ್ಲ ಸದಸ್ಯರನ್ನು ದಾಂಡೇಲಿ ಸಮೀಪದ ರೆಸಾರ್ಟ್ವೊಂದಕ್ಕೆ ಸ್ಥಳಾಂತರಿಸಿರುವ ಬಿಜೆಪಿ ಮುಖಂಡರು, ಕಾಂಗ್ರೆಸ್ಗೆ ಮುಖಭಂಗ ಮಾಡಲು ಪ್ರತಿತಂತ್ರ ರೂಪಿಸುತ್ತಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಮತ್ತು ಮುಖಂಡರೊಂದಿಗೆ ಕಾರ್ಪೊರೇಟರ್ಗಳು ಸತತ ಸಂಪರ್ಕದಲ್ಲಿದ್ದು, ಯಾವುದೇ ಹಂತದಲ್ಲಿಯೂ ಕಾಂಗ್ರೆಸ್ನ ಆಮಿಷಕ್ಕೆ ಒಳಗಾಗಲು ಅವಕಾಶ ಸಿಗದಂತೆ ವ್ಯವಸ್ಥೆ ಮಾಡಲಾಗಿದೆ.ಈ ನಿಟ್ಟಿನಲ್ಲಿ ಶಾಸಕ ಅರವಿಂದ ಬೆಲ್ಲದ ಅವರು ದಾಂಡೇಲಿಯಲ್ಲಿರುವ ತಮ್ಮ ಪಕ್ಷದ ಎಲ್ಲ ಸದಸ್ಯರನ್ನು ರವಿವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಕಾಂಗ್ರೆಸ್ಗೆ ಅಧಿಕಾರದ ಚುಕ್ಕಾಣಿ ಸಿಗದಿರುವಂತೆ ಕಾರ್ಯಯೋಜನೆ ರೂಪಿಸುತ್ತಿದ್ದಾರೆ.