ರಾಹುಲ್ ಗಾಂಧಿ ಬೆಂಗಳೂರಿನ ಹೆಚ್​​ಎಎಲ್​ ಬಗ್ಗೆ ಅಪಪ್ರಚಾರ: ಕ್ಷಮೆಯಾಚಿಸುವಂತೆ ಮಾಜಿ ಸಿಎಂ ಬಿಎಸ್‌ವೈ ಆಗ್ರಹ

Ravi Talawar
WhatsApp Group Join Now
Telegram Group Join Now

ಬೆಂಗಳೂರು,ಏಪ್ರಿಲ್​ 12: : ಬೆಂಗಳೂರಿನ ಹೆಚ್​​ಎಎಲ್​ ಬಗ್ಗೆ ಅಪಪ್ರಚಾರ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿ.ಎಸ್.ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದು, ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ಚುನಾವಣಾ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಡೆಯುತ್ತಿದೆ ಎಂಬುದನ್ನು ಕಾಂಗ್ರೆಸ್​ನವರು ಮರೆತು ಹೋಗಿದ್ದಾರೆ ಎಂಬ ರೀತಿ ಭಾಸವಾಗುತ್ತಿದೆ. ರಾಹುಲ್ ಗಾಂಧಿ ನಾಯಕತ್ವ ವಿಫಲವಾಗಿರುವುದರಿಂದ ಯಾವ ನಾಯಕ ಕೂಡಾ ಅವರ ಹೆಸರು ಹೇಳಲು ರೆಡಿ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸಾರ್ಹ ನಾಯಕ ಇಲ್ಲದೇ ಕೇಂದ್ರ ಸರ್ಕಾರದ ಮೇಲೆ ವಿವಾದ ಸೃಷ್ಟಿಸಿ ಜನ ಬೆಂಬಲ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಮೋದಿ ಕೆಲಸಗಳ ಆಧಾರದ ಮೇಲೆ ನಾವು ಚುನಾವಣೆ ಎದುರಿಸುತ್ತಿದ್ದೇವೆ. ಬೆಂಗಳೂರಿನ ಹೆಚ್​​ಎಎಲ್​ ಮುಚ್ಚುತ್ತಾರೆ ಎಂದು ಅಪಪ್ರಚಾರ ಮಾಡಿದರು. ಆದರೆ ಇಂದು ಹೆಚ್​ಎಎಲ್​​ ದಾಖಲೆಯ ಆದಾಯಗಳಿಸಿದೆ. ಅಪಪ್ರಚಾರ ಮಾಡಿದ ರಾಹುಲ್ ಗಾಂಧಿ ಕ್ಷಮೆ ಕೇಳುತ್ತಾರಾ? ಡಿ.ಕೆ. ಶಿವಕುಮಾರ್ ಕ್ಷಮೆ ಕೊಡಿಸುತ್ತಾರಾ?” ಎಂದು ಪ್ರಶ್ನಿಸಿದರು.

ಎರಡು ಕೋಟಿ ಜಾಬ್​ ನೀಡಿದ್ರಾ ಎಂದು ಕಾಂಗ್ರೆಸ್ ಕೇಳುತ್ತದೆ. ನಾವು ಬಂದ ನಂತರ 2023ರ ತ‌ನಕ 7 ಕೋಟಿ ಉದ್ಯೋಗ ಸೃಷ್ಟಿ ಆಗಿದೆ. ಆದರೆ, ರಾಜ್ಯದಲ್ಲಿ ಸಿದ್ದರಾಮಯ್ಯ ಎಷ್ಟು ಉದ್ಯೋಗ ನೀಡಿದ್ದಾರೆ?. ಕೇವಲ ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಮಾತ್ರ ಉದ್ಯೋಗ ಸೃಷ್ಟಿಯಾಗಿದೆ. ಹತ್ತು ತಿಂಗಳಲ್ಲಿ ಒಂದೇ ಒಂದು ಉದ್ಯೋಗ ಕೊಡದಿರುವುದು ಸಿದ್ದರಾಮಯ್ಯ ಸರ್ಕಾರದ ದಾಖಲೆಯಾಗಿದೆ” ಎಂದು ಟೀಕಿಸಿದರು.

WhatsApp Group Join Now
Telegram Group Join Now
Share This Article