ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು: ಮಾಜಿ ಸಿಎಂ ಯಡಿಯೂರಪ್ಪ

Ravi Talawar
WhatsApp Group Join Now
Telegram Group Join Now

ಹುಬ್ಬಳ್ಳಿ, ಏಪ್ರಿಲ್ 15: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ‘ರೋಡ್‌ ಶೋ’ ಗು ಮೊದಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಮಾಜಿ ಸಿಎಂ ಯಡಿಯೂರಪ್ಪ ಅವರು, ಧಾರವಾಡ ಮತ ಕ್ಷೇತ್ರದಲ್ಲಿ ಜನರು ಪ್ರಹ್ಲಾದ್ ಜೋಶಿಯವರ ಪರವಾಗಿದ್ದಾರೆ. ಶ್ರೀ ಶಿರಹಟ್ಟಿಮಠದ ಶ್ರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರವಾಗಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಅವರು ಹೇಳಿದರು.

ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯ ಪರವಾಗಿದ್ದಾರೆ. ನೀವು ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು. ತಮ್ಮ ರಾಜಕೀಯ ನಿರ್ಧಾರ ಕೈ ಬಿಡಬೇಕು ಎಂದು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.

ಕರ್ನಾಟಕದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಬುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ಹೇಳಿದರು

WhatsApp Group Join Now
Telegram Group Join Now
Share This Article