ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರಲ್ಲಿ ಮುಳುಗಿ ಸಾವು

Ravi Talawar
WhatsApp Group Join Now
Telegram Group Join Now

ಹಾಸನ,16: ಶಾಲೆಗೆ ರಜೆ ಇರುವುದರಿಂದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ನಡೆದಿದೆ. ಮುತ್ತಿಗೆ ಗ್ರಾಮದ ಬಾಲಕರಾದ ಜೀವನ್(13), ಸಾತ್ವಿಕ್(11), ವಿಶ್ವ ಹಾಗೂ ಪೃಥ್ವಿ (12) ಮೃತರು. ಇನ್ನೊಬ್ಬ ಬಾಲಕ ಚಿರಾಗ್ (10) ಬದುಕುಳಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆಗೆ ರಜೆ ಇರುವುದರಿಂದ ಕೆರೆಗೆ ಮಕ್ಕಳು ಈಜಲು ಹೋಗಿದ್ದರು. ಈ ವೇಳೆ ಮೀನು ಹಿಡಿಯುವ ಮೋಜಿಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಹಿಡಿಯುವುದಕ್ಕೆ ಆಳದ ನೀರಿಗೆ ಇಳಿದಿದ್ದಾರೆ. ಆಗ ಮಕ್ಕಳು ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನೀರಲ್ಲಿ ಮುಳುಗಿದ ಬಾಲಕರಿಗಾಗಿ ಹುಡುಕಾಟ ಆರಂಭಿಸಿದೆ. ಇಬ್ಬರ ಬಾಲಕರ ಮೃತದೇಹ ಹೊರತೆಗೆದಿದ್ದಾರೆ.

ಸ್ಥಳಕ್ಕೆ ಆಗಮಿಸಿದ್ದ ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳ ಶವ ಹೊರತೆಗೆಯುವ ಕಾರ್ಯಾಚರಣೆ ಚುರುಕಾಗಿ ನಡೆಸುವಂತೆ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಸೂಚಿಸಿದರು. ಈ ವೇಳೆ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

 

WhatsApp Group Join Now
Telegram Group Join Now
Share This Article