ರಾಜ್ಯ ಅಭಿವೃದ್ಧಿಗೆ ಕರ್ನಾಟಕದಲ್ಲಿ ಮತ್ತೆ ಡಬಲ್ ಇಂಜಿನ್ ಸರ್ಕಾರ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

Ravi Talawar
WhatsApp Group Join Now
Telegram Group Join Now

ಮೈಸೂರು: ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಮತ್ತೆ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗುರುವಾರ ಹೇಳಿದರು.

ಮಂಡ್ಯದಲ್ಲಿ ನಡೆದ ಬಿಜೆಪಿ-ಜೆಡಿಎಸ್ ರ್ಯಾಲಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ಗೋವಾದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ. ಚುನಾವಣೆಯ ನಂತರ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಉರುಳಲಿದ್ದು, ಮತ್ತೆ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ರಚನೆಯಾಗಲಿದೆ ಎಂದು ಹೇಳಿದು.

ವಿಧಾನಸಭಾ ಚುನಾವಣೆ ವೇಳೆ ಜೆಡಿಎಸ್ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದಿದ್ದರೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಿದ್ದರು. ಆದರೆ, ಅಧಿಕಾರಕ್ಕೆ ಬಂದ ಕಾಂಗ್ರೆಸ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಸ್ಥಗಿತಗೊಳಿಸಿತು.

ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. “ಕಾಂಗ್ರೆಸ್ ಜಾತಿಯ ಆಧಾರದ ಮೇಲೆ ರಾಜಕೀಯ ಮಾಡುತ್ತಿದೆ, ಆದರೆ, ಬಿಜೆಪಿ ವಿಕಾಸದ ಮೇಲೆ ರಾಜಕಾರಣ ಮಾಡುತ್ತಿದೆ. ನಾರಿ ಶಕ್ತಿ, ಯುವ ಶಕ್ತಿ, ಕಿಸಾನ್ ಶಕ್ತಿ ಮತ್ತು ಗರೀಬ್ ಕಲ್ಯಾಣ್ ಎಂಬ ನಾಲ್ಕು ಸ್ಥಂಭಗಳ ಸರ್ಕಾರ ಮುನ್ನಡೆಯಲು ಜನರು ಬೆಂಬಲ ನೀಡಬೇಕು ಎಂದು ಕೋರಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರ ಐವತ್ತು ವರ್ಷ ಮಾಡದೇ ಇರುವ ಕೆಲಸವನ್ನು ಮೋದಿ ಸರ್ಕಾರ ಹತ್ತು ವರ್ಷಗಳಲ್ಲಿ ಮಾಡಿದೆ. ಈ ವಿಷಯವಾಗಿ ರಾಹುಲ್ ಗಾಂಧಿ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಬಳಿಕ ಮಾತನಾಡಿದ ಯಡಿಯೂರಪ್ಪ ಅವರು ರಾಜ್ಯಾದ್ಯಂತ ಬಿಜೆಪಿ-ಜೆಡಿಎಸ್ ಪರ ಪ್ರಬಲ ಅಲೆ ಇದ್ದು, ಕಾಂಗ್ರೆಸ್ ಪಕ್ಷದ ಹಣ ಮತ್ತು ಬಲವನ್ನು ಸೋಲಿಸಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು.

ನಮ್ಮ ಸರಕಾರದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಮೇಲೆ ಜನರಿಗೆ ನಂಬಿಕೆಯಿದೆ. ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲುವು ಸಾಧಿಸುತ್ತಾರೆ. ಆದರೆ, ಮಂಡ್ಯದಿಂದಲೇ ಸ್ಪರ್ಧಿಸಬೇಕೆಂದು ಜನರು ಬಯಸಿದ್ದರು. ಹೀಗಾಗಿ ಮಂಡ್ಯದಿಂದಲೇ ಸ್ಪರ್ಧೆಗಿಳಿದಿದ್ದಾರೆ. ಚುನಾವಣೆಯಲ್ಲಿ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆಂಬ ವಿಶ್ವಾಸವಿದೆ ಎಂದರು.

WhatsApp Group Join Now
Telegram Group Join Now
Share This Article