ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ಪಿಡಿಒಗಳ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಇಂದು ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪಿಡಿಒ ಸೇರಿದಂತೆ ಗ್ರಾಮಪಂಚಾಯತಿ ಸಿಬ್ಬಂದಿ ವರ್ಗಾವಣೆಯಲ್ಲಿ ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸಲಾಗುವುದು ಎಂದು ತಿಳಿಸಿದರು
ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಆಡಳಿತ ಹಾಗೂ ಕಾರ್ಯವೈಖರಿ ಮೇಲೆ ನಿಗಾ ವಹಿಸಲು ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತಿದೆ. ಅದಕ್ಕಾಗಿ ಪಂಚತಂತ್ರ ತಂತ್ರಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಸದನಕ್ಕೆ ತಿಳಿಸಿದರು.