ಮೌನೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಧರ್ಮಸ್ಥಳ ಯೋಜನೆಯಿಂದ 1ಲಕ್ಷ ರೂಪಾಯಿ ಚೆಕ್ ಹಸ್ತಾಂತರ

Ravi Talawar
WhatsApp Group Join Now
Telegram Group Join Now

ಧಾರವಾಡ,ಏಪ್ರಿಲ್​ 22:  : ತಾಲೂಕಿನ ನರೇಂದ್ರ ಗ್ರಾಮದಲ್ಲಿನ ಶ್ರೀ ಮೌನೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಮಂಜೂರಾದ ಚೆಕ್‌ನ್ನು ಶುಕ್ರವಾರ ಶ್ರೀ ಮೌನೇಶ್ವರ ದೇವಸ್ಥಾನ ಕಮೀಟಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರದಿಂದ ಮಂಜೂರಾದ ೧ ಲಕ್ಷ ರೂಪಾಯಿ ಮೊತ್ತದ ಚೆಕ್ ನ್ನು ಹಸ್ತಾಂತರಿಸಿ ಮಾತನಾಡಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆಯ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ, ಶ್ರೀ ಧರ್ಮಸ್ಥಳ ಕ್ಷೇತ್ರದ ಧಮಾಧಿಕಾರಿ ಡಾ.ಸಿ.ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ ವಲಯ ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಭಕ್ತರು ಕ್ಷೇತ್ರಕ್ಕೆ ಸಲ್ಲಿಸುವ ಕಾಣಿಕೆಯನ್ನು ಮರಳಿ ಸಮಾಜಕ್ಕೆ ಕೊಡುವ ಕಾರ್ಯವನ್ನು ನಿರಂತರವಾಗಿ ಮುಂದುವರೆಸುತ್ತಿದ್ದಾರೆ. ದೇವಸ್ಥಾನಗಳ ಅಭಿವೃದ್ಧಿಗೆ ಆರ್ಥಿಕ ನೆರವು, ಸ್ಮಶಾನ ಅಭಿವೃದ್ಧಿ, ನಿರ್ಗತಿಕರಿಗೆ ಮನೆ ನಿರ್ಮಾಣ ಮುಂತಾದ ಕಾರ್ಯಗಳನ್ನು ಯೋಜನೆಯ ಮೂಲಕ ಅನುಷ್ಠಾನಗೊಳಿಸುತ್ತಿದ್ದಾರೆ.

ಇದರ ಜೊತೆಗೆ ಕೆರೆಗಳ ಪುನಶ್ಚೇತನ ಮತ್ತು ನಿರ್ಮಾಣಕ್ಕೆ ಆರ್ಥಿಕ ಸಹಾಯ ಮಾಡುವ ಮೂಲಕ ಜನ- ಜಾನುವಾರು, ಪಕ್ಷಿಗಳಿಗೆ ಜಲ ಅಭಾವ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಈ ವರ್ಷ ಜಿಲ್ಲೆಯಲ್ಲಿಯೂ ಅನೇಕ ಕೆರೆಗಳ ಹೋಳೆತ್ತುವ ಮತ್ತು ನಿರ್ಮಾಣ ಮಡಲು ಯೋಜನೆ ರೂಪಿಸಲಾಗಿದೆ ಎಂದರು.

ಸ್ಥಳೀಯ ಮಳೆಪ್ಪಜ್ಜನ ಮಠದ ಶ್ರೀ ಸಂಗಮೇಶ ಸ್ವಾಮೀಜಿಗಳ ಸಮ್ಮುಖದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ನಾಗೇಶ ಹಟ್ಟಿಹೊಳಿ, ಉಪಾಧ್ಯಕ್ಷೆ ಮಲ್ಲವ್ವ ತಳವಾರ, ಸದಸ್ಯ ಆತ್ಮಾನಂದ ಹುಂಬೇರಿ, ಉದ್ಯಮಿ ಸುನೀಲ ಇಂಗಳಗಿ, ಮುಖಂಡರಾದ ಮಂಜುನಾಥ ತಿರ್ಲಾಪೂರ, ಈಶ್ವರ ಗಾಣಿಗೇರ, ಶ್ರೀ ಮೌನೇಶ್ವರ ದೇವಸ್ಥಾನ ಕಮೀಟಿಯ ದುಂಡಪ್ಪ ಬಡಿಗೇರ, ಷಣ್ಮುಖ ಬಡಿಗೇರ, ಬಸವರಾಜ ಕಮ್ಮಾರ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪುಂಡಲೀಕ ಹಡಪದ, ಯೋಜನಾಧಿಕಾರಿ ಮಯೂರ ತೋರಸ್ಕರ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article