ರನ್ನ ಬೆಳಗಲಿಯ ಸಾರ್ವಜನಿಕರಿಗೆ ಪ್ರಾಕೃತಿಕ ವಿಕೋಪಗಳ ಕುರಿತು ಮುನ್ನೆಚ್ಚರಿಕೆ ನೀಡಿದ ಮುಖ್ಯಾಧಿಕಾರಿ: ಎನ್.ಎ.ಲಮಾಣಿ

Ravi Talawar
WhatsApp Group Join Now
Telegram Group Join Now

ರನ್ನ ಬೆಳಗಲಿ: ಮಾ.04., ಪಟ್ಟಣ ಪಂಚಾಯತ್ ಆಶ್ರಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಟ್ಟಣದ ಮುಖ್ಯಾಧಿಕಾರಿಗಳಾದ ಎನ್.ಎ.ಲಮಾಣಿ ಅವರು ರನ್ನ ಬೆಳಗಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಸಾರ್ವಜನಿಕರಿಗೆ ಸರ್ಕಾರದ ಸುತ್ತೋಲೆ ಪ್ರಕಾರ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು- ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ.

ಗುಡುಗು ಸಿಡಿಲುಗಳು ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವುದು ಹೆಚ್ಚಾಗಿರುತ್ತದೆ. ಆದ್ದರಿಂದ ಸಾರ್ವಜನಿಕರು ಗುಡುಗು ಸಿಡಿಲಿನಿಂದ ಆಗುವ ಅಪಾಯಗಳನ್ನು ತಪ್ಪಿಸಲು, ಅಂತಃ ಸಂದರ್ಭದಲ್ಲಿ ಸಾಮಾನ್ಯವಾಗಿ ಮನೆಯಿಂದ ಹೊರಗೆ ಹೋಗದಿರುವುದು. ಗುಡುಗು ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊಂದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತ ಕಟ್ಟಡಗಳಾದ ಮನೆಗಳು, ಕಛೇರಿಗಳು, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವ ವಾಹನಗಳಲ್ಲಿ ಆಶ್ರಯ ಪಡೆಯುವುದು. ಕೆರೆ ಮತ್ತು ನದಿಗಳು ಹಾಗೂ ಇನ್ನಿತರೆ ನೀರಿನ ಮೂಲಗಳಿಂದ ತಕ್ಷಣವೇ ದೂರವಿರುವುದು. ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವರ್ ವಿದ್ಯುತ್ ಗೋಪುರ ಹಾಗೂ ರೈಲು ಹಳಿ ಗಳಿಂದ ದೂರವಿರುವುದು.

ಮಿಂಚನ್ನು ಆಕರಿಸುವಂತಹ ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಹಾಗೇ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ಬೈಕ್ ಗಳು,
ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು. ಮೊಬೈಲ್ ಫೋನುಗಳನ್ನು ಮತ್ತು ವಿದ್ಯುತ್ ಸಂಪರ್ಕ ಹೊಂದಿರುವ
ದೂರವಾಣಿಯನ್ನು ಬಳಸಬಾರದು. ವಿದ್ಯುತ್ ಸಂಪರ್ಕ ಹೊಂದಿರುವಂತಹ ಎಲೆಕ್ಟ್ರಿಕಲ್ ಉಪಕರಣಗಳನ್ನು ವಿದ್ಯುತ್ ಸಂಪರ್ಕ ದಿಂದ ಕಡಿತಗೊಳಿಸುವುದು. ಮಿಂಚು ಬರುವ ಸಮಯದಲ್ಲಿ ರಬ್ಬರ್ ಸೋಲ್ ಇರುವ ಪಾದರಕ್ಷೆಗಳು ಮತ್ತು ಕಾರಣ ಚಕ್ರಗಳು ಸುರಕ್ಷಿತವಲ್ಲದ ಕಾರಣ ಅವುಗಳಿಂದ ದೂರವಿರುವುದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ, ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು. ಒಟ್ಟಾರೆಯಾಗಿ ಸಿಡಿಲು ಬಡಿತ ದಿಂದ ಪ್ರಾಣ ಹಾನಿಯನ್ನು ತಪ್ಪಿಸಲು ಈ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ವಿನಂತಿಸಿಕೊಂಡರು.

ಪಟ್ಟಣ ಪಂಚಾಯತಿಯ ಪ್ರಥಮ ದರ್ಜೆ ಸಹಾಯಕರಾದ ಪಿ.ಡಿ.ನಾಗನೂರು, ಎಸ್.ಬಿ.ಚೌದ್ರಿ,ರಾಜು ಮುಗಳಖೋಡ , ಬಾಬು ಜಕಾತಿ, ಸಚಿನ ಕಾಸರ, ಸಿದ್ದು ಅಳ್ಳಿಮಟ್ಟಿ, ಶಿವು ಬಾವಿಮನಿ, ಪೂನಂ ಕುಂಬಾರ ಮತ್ತು ಪತ್ರಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article